ಕರ್ನಾಟಕ

karnataka

ಮೈಸೂರಿನಲ್ಲಿ ಇಂದು 312 ಸೋಂಕಿತರ ಪ್ರಕರಣಗಳು ಪತ್ತೆ: 12 ಮಂದಿ ಸಾವು...

By

Published : Sep 15, 2020, 8:51 PM IST

ಮೈಸೂರು ಜಿಲ್ಲೆಯಲ್ಲಿ ಇಂದು 312 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದೆ.

mysore
ಮೈಸೂರು

ಮೈಸೂರು:ಜಿಲ್ಲೆಯಲ್ಲಿ ಇಂದು 312 ಕೊರೊನಾ ಸೋಂಕಿತ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 476 ಡಿಸ್ಚಾರ್ಜ್ ಹಾಗೂ 12 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ.

ಇಂದು ಜಿಲ್ಲೆಯಲ್ಲಿ 312 ಸೋಂಕಿತ ಪ್ರಕರಣಗಳು ಸೇರಿದಂತೆ, ಒಟ್ಟು ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 26,740 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿಂದು ಕೊರೊನಾ ಸೋಂಕಿನಿಂದ 476 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ 19,579 ಮಂದಿ ಗುಣಮುಖರಾದಂತಾಗಿದೆ.

ಇನ್ನು ಜಿಲ್ಲೆಯಲ್ಲಿ 6,546 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದಿನ ಜಿಲ್ಲೆಯಲ್ಲಿ 12 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದು, ಈ ಮೂಲಕ ಸಾವನ್ನಪ್ಪಿದವರ ಸಂಖ್ಯೆ 615 ಕ್ಕೆ ಏರಿಕೆಯಾಗಿದೆ.

ABOUT THE AUTHOR

...view details