ಮೈಸೂರು: ಹತ್ತು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಬಿಹಾರ ಮೂಲದ ವ್ಯಕ್ತಿಗೆ ಮೈಸೂರಿನ ಪೋಕ್ಸೊ ವಿಶೇಷ ನ್ಯಾಯಾಲಯ 43 ವರ್ಷ ಕಠಿಣ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ತಿ.ನರಸೀಪುರ ತಾಲೂಕಿನ ಫಾರಂ ಹೌಸ್‌ನಲ್ಲಿ ಕುದುರೆಗಳಿಗೆ ಲಾಳ ಕಟ್ಟುವ ಕೆಲಸ ಮಾಡಿಕೊಂಡಿದ್ದ ಬಿಹಾರ ಮೂಲದ ನಾಜೀಮ್ ಶಿಕ್ಷೆಗೆ ಗುರಿಯಾದವನು.
ಈತ ಬಾಲಕಿಗೆ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿಯೂ ಬೆದರಿಕೆ ಹಾಕಿದ್ದಾನೆ. ಬಾಲಕಿ ಭಯಗೊಂಡು ಪೋಷಕರಿಗೆ ನಡೆದ ದೌರ್ಜನ್ಯವನ್ನು ವಿವರಿಸಿದ್ದಾಳೆ. ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ, ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.