ಮೈಸೂರು:ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಜಿಲ್ಲೆಯಲ್ಲಿ ಏರಿಕೆಯಾಗುತ್ತಿದೆ. ಇಂದು ಹೊಸದಾಗಿ 49 ಮಂದಯಲ್ಲಿ ಕೊರೊನಾ ದೃಢಪಟ್ಟಿದ್ದು, ನಾಲ್ವರು ಸೋಂಕಿರು ಸಾವನ್ನಪ್ಪಿದ್ದಾರೆ.
ಮೈಸೂರಲ್ಲಿ ಇಂದು 49 ಮಂದಿಯಲ್ಲಿ ಕೊರೊನಾ ಪತ್ತೆ: ನಾಲ್ವರು ಸಾವು! - Mysore DC Abhiram G. Shankar
ಮೈಸೂರಲ್ಲಿ ಕೊರೊನಾ ಸೋಂಕಿತರು ಹೆಚ್ಚುತ್ತಲೇ ಇದ್ದಾರೆ. ಇಂದು ಮಹಾಮಾರಿಗೆ ನಾಲ್ವರು ಬಲಿಯಾಗಿದ್ದು, ಹೊಸದಾಗಿ 49 ಪ್ರಕರಣಗಳು ದೃಢಪಟ್ಟಿವೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 528ಕ್ಕೆ ಏರಿಕೆಯಾಗಿದೆ.
ಮೈಸೂರು: ಕೊರೊನಾ ಮಾರಿಗೆ ನಾಲ್ವರು ಬಲಿ...49 ಮಂದಿಗೆ ಸೋಂಕು ದೃಢ
2ನೇ ಹಂತದಲ್ಲಿ ಮೈಸೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಪ್ರಕರಣಗಳು ಹೆಚ್ಚಾಗುತ್ತಿದ್ದು, ಬೇರೆ ಜಿಲ್ಲೆಯಿಂದ ಬಂದವರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದು. ಇದರ ನಡುವೆಯೂ ಇಂದು 35 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 528ಕ್ಕೆ ಏರಿಕೆಯಾಗಿದೆ. ಅದರಲ್ಲಿ ಒಟ್ಟು 306 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ಜಿಲ್ಲೆಯಲ್ಲಿ 12 ಮಂದಿ ಸಾವನ್ನಪ್ಪಿದ್ದು, ಇಂದು ಒಂದೇ ದಿನ 4 ಮಂದಿ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.