ಮೈಸೂರು: ಆತ್ಮಹತ್ಯೆಗೆ ಶರಣಾಗಿದ್ದ ನಂಜನಗೂಡು ತಾಲೂಕಿನ ಪ್ರಭಾರ ತಾಲೂಕು ಆರೋಗ್ಯ ಅಧಿಕಾರಿ ಕುಟುಂಬಕ್ಕೆ 50 ಲಕ್ಷ ರೂಪಾಯಿ ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿದೆ.
ಆತ್ಮಹತ್ಯೆ ಮಾಡಿಕೊಂಡ ವೈದ್ಯಾಧಿಕಾರಿ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ - Nanjanagudu
ನಂಜನಗೂಡು ತಾಲೂಕಿನ ಪ್ರಭಾರ ತಾಲೂಕು ಆರೋಗ್ಯ ಅಧಿಕಾರಿಯಾಗಿದ್ದ ಡಾ.ಎಸ್.ಆರ್.ನಾಗೇಂದ್ರ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಸದ್ಯ ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಸರ್ಕಾರ ಘೋಷಣೆ ಮಾಡಿದೆ.
ನಿನ್ನೆ ನಂಜನಗೂಡು ತಾಲೂಕಿನ ಪ್ರಭಾರ ತಾಲೂಕು ಆರೋಗ್ಯ ಅಧಿಕಾರಿಯಾಗಿದ್ದ ಡಾ.ಎಸ್.ಆರ್.ನಾಗೇಂದ್ರ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಇವರ ಸಾವಿಗೆ ಮೇಲಧಿಕಾರಿಗಳ ಕಿರುಕುಳ ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ತನಿಖೆ ನಡೆಸಬೇಕು ಎಂದು ಕರ್ನಾಟಕ ರಾಜ್ಯ ನೌಕರರ ಸಂಘ ಸಿಎಂಗೆ ಮನವಿ ಮಾಡಿತ್ತು.
ಈ ಮನವಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಮೃತರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಘೋಷಣೆ ಮಾಡಿ, ಕುಟುಂಬಕ್ಕೆ ಸರ್ಕಾರದಿಂದ ಸಿಗಬೇಕಾದ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡಲು ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದಾರೆ. ಇನ್ನು ಘಟನೆಯ ಬಗ್ಗೆ ಸಂಪೂರ್ಣ ತನಿಖೆ ನಡೆಸಿ 7 ದಿನದ ಒಳಗೆ ವರದಿ ಸಲ್ಲಿಸುವಂತೆ ಮೈಸೂರಿನ ಪ್ರಾದೇಶಿಕ ಆಯುಕ್ತರಿಗೆ ಆದೇಶ ಮಾಡಿದ್ದಾರೆ.