ಮೈಸೂರು:ಇಂದು ಮೈಸೂರು ಜಿಲ್ಲೆಯಲ್ಲಿ 562 ಕೊರೊನಾ ಸೋಂಕಿನ ಹೊಸ ಪ್ರಕರಣಗಳು ಪತ್ತೆಯಾಗಿದ್ದು, 5 ಜನ ಸಾವನ್ನಪ್ಪಿದ್ದು, 240 ಜನ ಗುಣಮುಖರಾಗಿದ್ದಾರೆ.
ಮೈಸೂರಿನಲ್ಲಿ ಇಂದು 562 ಕೊರೊನಾ ಪ್ರಕರಣ ಪತ್ತೆ.. 240 ಜನ ಗುಣಮುಖ - Mysore DC
ಇಂದು ಮೈಸೂರು ಜಿಲ್ಲೆಯಲ್ಲಿ 562 ಹೊಸ ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
Abhiram G shankar
ಜಿಲ್ಲೆಯಲ್ಲಿ ಇಲ್ಲಿಯವರೆಗೆ 12,051 ಸೋಂಕಿತ ಪ್ರಕರಣಗಳು ದಾಖಲಾಗಿವೆ. ಅದರಲ್ಲಿ 7,302 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 4,429 ಜನ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇಲ್ಲಿಯವರೆಗೆ ಒಟ್ಟು 320 ಮಂದಿ ಮರಣ ಹೊಂದಿದ್ದಾರೆ.
ಹೆಚ್ಚು ಹೆಚ್ಚು ಕೋವಿಡ್ ಟೆಸ್ಟ್ ಗಳನ್ನು ಮಾಡಲಾಗುತ್ತಿದೆ ಹಾಗೂ ಆಸ್ಪತ್ರೆಯಿಂದ ಗುಣಮುಖರಾಗುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ ಎಂದು ಜಿಲ್ಲಾಧಿಕಾರಿ ಅಭಿರಾಮ ಜಿ. ಶಂಕರ್ ತಿಳಿಸಿದ್ದಾರೆ.