ಮೈಸೂರು:ನಗರದಲ್ಲಿ ಇಂದು 7 ಮಂದಿ ಡಿಸ್ಚಾರ್ಜ್ ಆಗಿದ್ದು, ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 86ಕ್ಕೇರಿದೆ. ಈ ಪ್ರಕರಣಗಳ ಪೈಕಿ ಈವರೆಗೆ 31 ಮಂದಿ ಡಿಸ್ಚಾರ್ಜ್ ಆಗಿದ್ದು, 55 ಪ್ರಕರಣಗಳು ಸಕ್ರಿಯವಾಗಿವೆ.
ಮೈಸೂರಿನಲ್ಲಿ ಇಂದು 7 ಮಂದಿ ಡಿಸ್ಚಾರ್ಜ್, ಮತ್ತಿಬ್ಬರಿಗೆ ಕೊರೊನಾ ದೃಢ: 86ಕ್ಕೇರಿದ ಸೋಂಕಿತರ ಸಂಖ್ಯೆ
ಮೈಸೂರಿನಲ್ಲಿ ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ಇರುವುದು ಪತ್ತೆಯಾಗಿದ್ದು, ಜಿಲ್ಲೆಯಲ್ಲಿನ ಸೋಂಕಿತರ ಸಂಖ್ಯೆ 86ಕ್ಕೆ ಏರಿಕೆಯಾಗಿದೆ.
ರೋಗಿ ಸಂಖ್ಯೆ 416 ಹಾಗೂ 417 ಇವರಿಬ್ಬರಿಗೆ ರೋಗಿ ಸಂಖ್ಯೆ 52ರ ದ್ವಿತೀಯ ಸಂಪರ್ಕದಿಂದ ಕೊರೊನಾ ಸೋಂಕು ತಗುಲಿದ್ದು, ಇವರಿಬ್ಬರನ್ನು ಕೋವಿಡ್-19 ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಲ್ಲದೇ ಇಂದು ಒಂದೇ ದಿನ 7 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ಜುಬಿಲಂಟ್ ಕಾರ್ಖಾನೆಯ ಮೊದಲ ಸೋಂಕಿತ ವ್ಯಕ್ತಿ ಪಿ-52ರ ದ್ವಿತೀಯ ಸಂಪರ್ಕದಿಂದ ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 86ಕ್ಕೆ ಏರಿದ್ದು, ಅದರಲ್ಲಿ ಇಲ್ಲಿವರೆಗೆ 31 ಜನ ಆಸ್ಪತ್ರೆಯಿಂದ ಗುಣಮುಖರಾಗಿ ಮನೆಗೆ ಮರಳಿದ್ದಾರೆ. ಉಳಿದ 55 ಜನ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಅಭಿರಾಮ್ ಜಿ. ಶಂಕರ್ ತಿಳಿಸಿದ್ದಾರೆ.