ಮೈಸೂರು: 734 ಹೊಸ ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಮೂಲಕ ಸೋಂಕಿತರ ಸಂಖ್ಯೆ 17,544 ಕ್ಕೆ ಏರಿಕೆಯಾಗಿದೆ.
ಮೈಸೂರಿನಲ್ಲಿ 734 ಸೋಂಕಿತರು ಪತ್ತೆ, 11 ಬಲಿ - Mysore latest news
ಜಿಲ್ಲೆಯಲ್ಲಿ ಕೊರೊನಾ ಸೋಂಕು ಮತ್ತು ಮೃತ ಪ್ರಕರಣಗಳು ಹೆಚ್ಚುತ್ತಲೇ ಇದೆ. ಇಂದಿನ ಕೊರೊನಾ ವರದಿ ಹೀಗಿದೆ.
Mysore covid case
ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು ಮತ್ತು ಮೃತ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಇಂದು ಒಂದೇ ದಿನ 11 ಮಂದಿ ಮೃತಪಟ್ಟಿದ್ದಾರೆ. ಪರಿಣಾಮ ಮೃತರ ಸಂಖ್ಯೆ 438ಕ್ಕೆ ತಲುಪಿ ಜನರ ನಿದ್ದೆಗೆಡಿಸಿದೆ.
ಗುಣಮುಖರಾದ 255 ಮಂದಿ ವಿವಿಧ ಆಸ್ಪತ್ರೆಗಳಿಂದ ಇಂದು ಡಿಸ್ಚಾಜ್೯ ಆಗಿದ್ದಾರೆ. ಈವರೆಗೆ ಒಟ್ಟು 12,385 ಸೋಂಕಿತರು ಕೊರೊನಾ ಗೆದ್ದು ಬಂದಿದ್ದಾರೆ. ಸದ್ಯ 4,721 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.