ಮೈಸೂರು:ಜಿಲ್ಲೆಯಲ್ಲಿಂದು 790 ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, 12 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ 418 ಮಂದಿ ಕೋವಿಡ್ನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.
ಮೈಸೂರಿನಲ್ಲಿ ಬರೋಬ್ಬರಿ 790 ಮಂದಿಗೆ ಕೊರೊನಾ ದೃಢ... 12 ಮಂದಿ ಬಲಿ - Corona Latest News
ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಏರುತ್ತಲೇ ಸಾಗಿದ್ದು, ಇಂದು 790 ಪ್ರಕರಣಗಳು ಪತ್ತೆಯಾಗಿ ಒಂದೇ ದಿನ 12 ಮಂದಿ ಬಲಿಯಾಗಿದ್ದಾರೆ.
ಮೈಸೂರಿನಲ್ಲಿ ಬರೋಬ್ಬರಿ 790 ಮಂದಿಗೆ ಕೊರೊನಾ ದೃಢ...12 ಮಂದಿ ಬಲಿ
ಜಿಲ್ಲೆಯಲ್ಲಿ ಇಲ್ಲಿಯವರೆಗೆ 21,394 ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಅದರಲ್ಲಿ 14,064 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, 6,832 ಮಂದಿ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನು ಈವರೆಗೆ ಒಟ್ಟು 498 ಮಂದಿ ಜಿಲ್ಲೆಯಲ್ಲಿ ಮರಣ ಹೊಂದಿದ್ದಾರೆ. ಇಂದು ಸಹ 12 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.