ಮೈಸೂರು:ಇಂದು ಜಿಲ್ಲೆಯಲ್ಲಿ ಸೋಂಕಿನಿಂದ ಗುಣಮುಖರಾಗಿ 830 ಮಂದಿ ಬಿಡುಗಡೆಯಾಗಿದ್ದು, ಹೊಸದಾಗಿ 173 ಜನರಿಗೆ ಸೋಂಕು ತಗುಲಿದೆ.
ಗುಣಮುಖ:ಜಿಲ್ಲೆಯಲ್ಲಿಂದು ಒಂದೇ ದಿನ ಸೋಂಕಿನಿಂದ ಬರೋಬ್ಬರಿ 830 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ 42,962 ಮಂದಿ ಗುಣಮುಖರಾದಂತಾಗಿದೆ. ಇನ್ನೂ ಜಿಲ್ಲೆಯಲ್ಲಿ 2,658 ಜನರು ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.