ಕರ್ನಾಟಕ

karnataka

ETV Bharat / state

ಮೈಸೂರು: ಸಾಲಬಾಧೆ ತಾಳಲಾರದೆ ರೈತ ಆತ್ಮಹತ್ಯೆ - farmer commits suicide

ರೈತನೊಬ್ಬ ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಲ್ಲನಾಯಕನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.

farmer commits suicide
ಆತ್ಮಹತ್ಯೆ ಮಾಡಿಕೊಂಡ ರೈತ

By

Published : Jul 14, 2020, 7:26 PM IST

ಮೈಸೂರು: ರೈತನೊಬ್ಬ ಸಾಲಬಾಧೆ ತಾಳಲಾರದೆ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರದ ಅಲ್ಲನಾಯಕನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ರೈತ ನಾಗೇಂದ್ರ (44). ಈತ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಸಮೀಪದ ಅಲ್ಲನಾಯಕನಹಳ್ಳಿ ಗ್ರಾಮದ ನಿವಾಸಿಯಾಗಿದ್ದು, ತಮ್ಮ 2 ಎಕರೆ 20 ಗುಂಟೆ ಜಮೀನಿನಲ್ಲಿ ತಂಬಾಕು, ಶುಂಠಿ, ರಾಗಿ ಮತ್ತು ಹುರುಳಿ ಬೆಳೆಯುತ್ತಿದ್ದರು.

ಬೇಸಾಯಕ್ಕೆಂದು ವಿಎಸ್ಎಸ್ಎನ್ ಸೊಸೈಟಿ, ಸಹಾಯಕ ಸಂಘ ಮತ್ತು ಫೈನಾನ್ಸ್ ಸೇರಿದಂತೆ ಹಲವು ಕಡೆ 6 ಲಕ್ಷ ರೂಪಾಯಿವರೆಗೆ ಸಾಲ ಮಾಡಿಕೊಂಡಿದ್ದರು. ಸಾಲ ಮರು ಪಾವತಿಸಲಾಗದೇ ಕ್ರಿಮಿನಾಶಕ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details