ಮೈಸೂರು:ನಂಜನಗೂಡು ತಾಲೂಕಿನ ಕಳಲೆ ಗ್ರಾಮದಲ್ಲಿ ಮೂರು ವರ್ಷದ ಬಾಲಕಿ ಮೇಲೆ ಮನೆ ಗೋಡೆ ಕುಸಿದು ಬಿದ್ದ ಪರಿಣಾಮ ಕಂದಮ್ಮ ಗಾಯಗೊಂಡಿರುವ ಘಟನೆ ನಡೆದಿದೆ.
ಕಳಲೆ ಗ್ರಾಮದ ನಂಜುಂಡನಾಯಕ ಎಂಬುವವರ ಮಗಳಾದ ಪೂರ್ಣಿ(3) ಮೇಲೆ ಮನೆ ಗೋಡೆ ಕುಸಿದುಬಿದ್ದಿದೆ. ಗಾಯಗೊಂಡಿದ್ದ ಬಾಲಕಿಯನ್ನು ಚಿಕಿತ್ಸೆಗಾಗಿ ಮೈಸೂರಿನ ಚೆಲುವಾಂಬ ಆಸ್ಪತ್ರೆಗೆ ದಾಖಲಿಸಲಾಗಿದೆ.