ಮೈಸೂರು: ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆ, ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿರುವ ಘಟನೆ ಹೆಚ್.ಡಿ.ಕೋಟೆ ತಾಲೂಕಿನ ಕಾಡು ಹಂಪಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ..ನಿಟ್ಟುಸಿರು ಬಿಟ್ಟ ಗ್ರಾಮಸ್ಥರು - undefined
ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆಯ, ಕಾಟದಿಂದ ಗ್ರಾಮಸ್ಥರು ಬೇಸತ್ತಿದ್ದರು. ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಿದ್ದರು. ಈ ದೂರಿನ ಅನ್ವಯ ಅರಣ್ಯ ಇಲಾಖೆ ಚಿರತೆ ಸೆರೆ ಹಿಡಿಯಲು ಬೊನ್ ಇಟ್ಟಿದ್ದರು. ಇಂದು ಆ ಬೋನಿಗೆ ಚಿರತೆ ಬಿದ್ದಿದೆ.
![ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆ ಸೆರೆ..ನಿಟ್ಟುಸಿರು ಬಿಟ್ಟ ಗ್ರಾಮಸ್ಥರು](https://etvbharatimages.akamaized.net/etvbharat/prod-images/768-512-3781129-thumbnail-3x2-mur.jpg)
ಚಿರತೆ ಸೆರೆ
ಚಿರತೆ ಸೆರೆ
ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಾಡಂಚಿನ ಗ್ರಾಮ ಕಾಡು ಹಂಪಾಪುರ ಗ್ರಾಮಕ್ಕೆ ನುಗ್ಗಿ ಮೇಕೆಗಳನ್ನು ಹೊತ್ತೊಯ್ಯುತ್ತಿದ್ದ ಚಿರತೆಯ, ಕಾಟದಿಂದ ಗ್ರಾಮಸ್ಥರು ಬೇಸತ್ತಿದ್ದರು. ಈ ಬಗ್ಗೆ ಅರಣ್ಯ ಇಲಾಖೆಗೆ ದೂರು ನೀಡಲಾಗಿತ್ತು. ಈ ದೂರಿನ ಅನ್ವಯ ಅರಣ್ಯ ಇಲಾಖೆಯವರು ಗ್ರಾಮದ ಹೊರಗೆ ತೋಟದಲ್ಲಿ ಬೋನ್ ಇಟ್ಟಿದ್ದರು. ಈ ಬೋನ್ಗೆ ಇಂದು ಚಿರತೆ ಬಿದ್ದಿದ್ದು ಸೆರೆ ಸಿಕ್ಕ ಚಿರತೆಯನ್ನು ಅರಣ್ಯ ಸಿಬ್ಬಂದಿ ನಾಗರಹೊಳೆಯ ದಟ್ಟಾರಣ್ಯಕ್ಕೆ ಬಿಟ್ಟು ಬಂದಿದ್ದಾರೆ.