ಕರ್ನಾಟಕ

karnataka

ETV Bharat / state

ಪತ್ನಿಯನ್ನ ಕೊಂದು, ತಾನೂ ಆತ್ಮಹತ್ಯೆ ಮಾಡಿಕೊಂಡ ಪತಿ! - ಪತಿ ಆತ್ಮಹತ್ಯೆ

ಮಚ್ಚಿನಿಂದ ಕೊಚ್ಚಿ ಪತ್ನಿಯನ್ನ ಕೊಲೆ ಮಾಡಿ ಬಳಿಕ ಪತಿ ತಾನೂ ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ನಂಜನಗೂಡು ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.

wife killed
ಮಹಿಳೆಯ ಕೊಲೆ

By

Published : Feb 19, 2020, 12:26 PM IST

ಮೈಸೂರು: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ ಬಳಿಕ ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಮಡಹಳ್ಳಿ ಗ್ರಾಮದಲ್ಲಿ ನಡೆದಿದೆ.

ನಂಜನಗೂಡು ತಾಲೂಕಿನ ಮಡಹಳ್ಳಿ ಗ್ರಾಮದ ನಿವಾಸಿ ಶಾಂತಮೂರ್ತಿ (40) ಎಂಬಾತ ತನ್ನ ಪತ್ನಿ ಪುಟ್ಟಮಣಿ (38)ಅವರನ್ನ ಕೊಲೆ ಮಾಡಿ, ಬಳಿಕ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರಿಬ್ಬರಿಗೂ 15 ವರ್ಷಗಳ ಹಿಂದೆ ವಿವಾಹವಾಗಿದ್ದು, ಇಬ್ಬರು ಹೆಣ್ಣು ಮಕ್ಕಳನ್ನು ಹೊಂದಿದ್ದಾರೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ಪತಿ ಶಾಂತಮೂರ್ತಿ ಮಚ್ಚಿನಿಂದ ತನ್ನ ಹೆಂಡತಿಯ ಮೇಲೆ ಕುತ್ತಿಗೆ ಭಾಗ ಇರಿದ ಪರಿಣಾಮ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಬಳಿಕ ಪತಿ ಶಾಂತಮೂರ್ತಿ ಸಹ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸ್ಥಳಕ್ಕೆ ನಂಜನಗೂಡು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಘಟನೆಗೆ ಕಾರಣ ತಿಳಿದುಬಂದಿಲ್ಲ. ತನಿಖೆ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ನಂಜನಗೂಡು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details