ಕರ್ನಾಟಕ

karnataka

ETV Bharat / state

ಮಗು ಸಮೇತ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆ.. ನಂಜನಗೂಡಲ್ಲಿ ದುರಂತ

ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿ ತನ್ನ 8 ತಿಂಗಳ ಮಗುವಿನ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ.

Mother commits suicide with baby in Mysore
ದೊಡ್ಡ ಕವಲಂದೆ ಪೊಲೀಸ್ ಠಾಣೆ

By

Published : May 31, 2022, 8:30 PM IST

ಮೈಸೂರು: ಮಗು ಸಮೇತ ಬೆಂಕಿ ಹಚ್ಚಿಕೊಂಡು ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಂಜನಗೂಡು ತಾಲೂಕಿನ ದಾಸನೂರು ಗ್ರಾಮದಲ್ಲಿ ನಡೆದಿದೆ. ಮಾನಸಿಕ ಖಿನ್ನತೆಗೆ ಒಳಗಾಗಿದ್ದ ತಾಯಿ ತನ್ನ 8 ತಿಂಗಳ ಮಗುವಿನ ಸಮೇತ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. 24 ವರ್ಷದ ಸಿಂಧು ಹಾಗೂ ಎಂಟು ತಿಂಗಳ ಮಗು ಮುದ್ದು ಮೃತರು. ಮೃತ ಸಿಂಧು ಒಂಬತ್ತು ವರ್ಷಗಳ ಹಿಂದೆ ದಾಸನೂರು ಗ್ರಾಮದ ನಿವಾಸಿ ಮಹದೇವಸ್ವಾಮಿ ಎಂಬುವವರನ್ನು ವಿವಾಹವಾಗಿದ್ದರು.

ಈ ಹಿಂದೆ ಸಿಂಧು ಅವರಿಗೆ ನಾಲ್ಕು ಬಾರಿ ಗರ್ಭಪಾತವಾಗಿದ್ದು, ಕಳೆದ ವರ್ಷ ಗಂಡು ಮಗುವಿಗೆ ಜನ್ಮ ನೀಡಿದ್ದರು. ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಸಿಂಧು, ನಿನ್ನೆ ರಾತ್ರಿ ತಮ್ಮ ಮನೆಯಲ್ಲಿ ಯಾರೂ ಇಲ್ಲದ ವೇಳೆ ಮಗುವಿನ ಸಮೇತ ಬೆಂಕಿ ಹಚ್ಚಿಕೊಂಡಿದ್ದಾರೆ. ಕೂಡಲೇ ತಾಯಿ ಹಾಗೂ ಮಗುವನ್ನ ಮೈಸೂರಿನ ಕೆಆರ್ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ತಾಯಿ ಮಗು ಇಬ್ಬರೂ ಮೃತಪಟ್ಟಿದ್ದಾರೆ. ಈ ಸಂಬಂಧ ದೊಡ್ಡ ಕವಲಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ನಟಿ ಚೇತನ ರಾಜ್ ಪ್ರಕರಣ ಮಾಸುವ ಮುನ್ನವೇ ಮತ್ತೊಂದು 'ಫ್ಯಾಟ್​' ಸರ್ಜರಿ ಕೇಸ್​: ಯುವತಿ ನರಳಾಟ

ABOUT THE AUTHOR

...view details