ಮೈಸೂರು: ಸಿಎ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನ ದಾಸನಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಚಂದನ (23) ಮೃತ ದುರ್ದೈವಿ. ಈಕೆಯ ತಂದೆ ಕೆಎಸ್ಆರ್ಟಿಸಿ ನೌಕರನಾಗಿದ್ದು, ತಾಯಿ ಕೆನರಾ ಬ್ಯಾಂಕ್ನಲ್ಲಿ ಉದ್ಯೋಗಿಯಾಗಿದ್ದಾರೆ. ಎಂಕಾಂ ಮುಗಿಸಿದ್ದ ಚಂದನ ಸಿಎಗೆ ಸಿದ್ಧತೆ ಮಾಡಿಕೊಂಡಿದ್ದರು.
ಸಿಎ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ - ಸಿಎ ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು
ಮೈಸೂರಿನ ದಾಸನಕೊಪ್ಪಲು ಗ್ರಾಮದಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಮೈಸೂರು
ಮಾನಸಿಕ ಖಿನ್ನತೆಗೆ ಒಳಗಾಗಿ ತಾನಿರುವ ಮನೆಯ ಕೊಠಡಿಯಲ್ಲಿ ಗುರುವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಬೆಳಗ್ಗೆಯಾದರೂ ಮಗಳು ಆಚೆ ಬಾರದಿದ್ದರಿಂದ ಪೋಷಕರು ಬಾಗಿಲು ಒಡೆದು ನೋಡಿದಾಗ, ಆತ್ಮಹತ್ಯೆ ಮಾಡಿಕೊಂಡಿರುವುದು ಕಂಡು ಬಂದಿದೆ. ಈ ಸಂಬಂಧ ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:ಸುಟ್ಟಗಾಯ, ಹೃದಯ ಕಾಯಿಲೆಯಿಂದ ಬಳಲುತ್ತಿದ್ದ ಯುವತಿ 2021ರ ವಿಶ್ವಸುಂದರಿ ಸ್ಪರ್ಧೆ ರನ್ನರ್ ಅಪ್!