ಕರ್ನಾಟಕ

karnataka

ETV Bharat / state

ಮೈಸೂರು: ತಮಿಳುನಾಡು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ

ತಮಿಳುನಾಡು ಮೂಲದ ವಿದ್ಯಾರ್ಥಿನಿ ಮೈಸೂರಿನ ತಮ್ಮ ಹಾಸ್ಟೆಲ್‌ನ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ವಿದ್ಯಾರ್ಥಿನಿ ಆತ್ಮಹತ್ಯೆ
ವಿದ್ಯಾರ್ಥಿನಿ ಆತ್ಮಹತ್ಯೆ

By

Published : Jun 8, 2023, 11:11 AM IST

ಮೈಸೂರು: ತಮಿಳುನಾಡು ಮೂಲದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ತಮಿಳುನಾಡು ರಾಜ್ಯದ ನೀಲಗಿರಿ ಎಂಬ ಜಿಲ್ಲೆಯ ವಿದ್ಯಾರ್ಥಿನಿ ನಗರದ ಖಾಸಗಿ ಕಾಲೇಜೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದು, ತನ್ನ ಹಾಸ್ಟೆಲ್‌ನ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

ನಗರದ ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಸಿಎ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಸಮೀಪದಲ್ಲಿಯೇ ಇರುವ ಹಾಸ್ಟೆಲ್‌ನಲ್ಲಿ ಉಳಿದುಕೊಂಡಿದ್ದರು. ಬುಧವಾರ 1.30 ರ ಸಮಯದಲ್ಲಿ ಹಾಸ್ಟೆಲ್‌ನ ಕೋಣೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. 4ನೇ ಸೆಮಿಸ್ಟರ್‌ನಲ್ಲಿ ಫೇಲ್ ಆಗಿದ್ದೆ ಎಂಬ ಬೇಸರದಲ್ಲಿದ್ದರು. ಈ ಕಾರಣದಿಂದ ಆತ್ಮಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಮೈಸೂರು ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮುಂಬೈನ ಪುಲೆ ಬಾಲಕಿಯರ ಹಾಸ್ಟೆಲ್​ನಲ್ಲಿ ಯುವತಿ ಶವ ಪತ್ತೆ: ಮುಂಬೈನ ಚರ್ಚ್‌ಗೇಟ್ ಪ್ರದೇಶದ ಸಾವಿತ್ರಿಬಾಯಿ ಫುಲೆ ಬಾಲಕಿಯರ ಹಾಸ್ಟೆಲ್‌ನಲ್ಲಿ 19 ವರ್ಷದ ಯುವತಿಯೊಬ್ಬಳ ಶವ ನಗ್ನಾವಸ್ಥೆಯಲ್ಲಿ ಪತ್ತೆಯಾಗಿತ್ತು. ಹಾಸ್ಟೆಲ್​ ಕೊಠಡಿಯಲ್ಲಿ ದುಪ್ಪಟ ಸುತ್ತಿಕೊಂಡ ರೀತಿಯಲ್ಲಿ ಶವ ದೊರಕಿದ್ದು ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದರು.

ಹಾಸ್ಟೆಲ್​ನಲ್ಲಿ ಕೆಲಸ ಮಾಡುತ್ತಿದ್ದ ಓಂಪ್ರಕಾಶ್​ ಕನೋಜಿಯ ಎಂಬ ಉದ್ಯೋಗಿಯ ಮೇಲೆ ಅನುಮಾನವಿದ್ದು, ಆತನಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದರು. ಆದರೆ, ಈ ವಿಚಾರ ತಿಳಿದ ಶಂಕಿತ ಆರೋಪಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ, ಆತನ ಮೃತದೇಹ ಚಾರ್ನಿ ರೈಲು ನಿಲ್ದಾಣದಲ್ಲಿ ಪತ್ತೆಯಾಗಿರುವುದನ್ನು ಪೊಲೀಸರು ತಿಳಿಸಿದ್ದರು.

ಮೃತ ಯುವತಿ ಬಾಂದ್ರಾ ಪಾಲಿಟೆಕ್ನಿಕ್​ 2ನೇ ವರ್ಷದ ಕೋರ್ಸ್​ನಲ್ಲಿ ಓದುತ್ತಿದ್ದಳು. ಖಾಸಗಿ ಕಂಪನಿಯೊಂದರಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದರು. ಗುರುವಾರ (ಇಂದು) ಆಕೆ ಊರಿಗೆ ತೆರಳಲು ಸಿದ್ಧತೆ ನಡೆಸಿದ್ದಳು. ಹಾಸ್ಟೆಲ್‌ನಲ್ಲಿದ್ದ ಹಲವು ವಿದ್ಯಾರ್ಥಿಗಳು ತಮ್ಮ ತಮ್ಮ ಊರುಗಳಿಗೆ ತೆರಳಿದ್ದರು. ಉಳಿದ ಕೆಲವರ ಜೊತೆ ರಾತ್ರಿ 11.30ರ ಸುಮಾರಿಗೆ ಮಾತನಾಡಿದ್ದರು.

ಆದರೆ, ಹಾಸ್ಟೆಲ್‌ನ ನಾಲ್ಕನೇ ಮಹಡಿಯಲ್ಲಿ ಯುವತಿ ಮಾತ್ರ ಉಳಿದುಕೊಂಡಿದ್ದರು. ಕನೋಜಿಯಾ ಈ ಪರಿಸ್ಥಿತಿಯ ಲಾಭ ಪಡೆದಿರಬಹುದು. ಸದ್ಯ ಹಾಸ್ಟೆಲ್‌ನಲ್ಲಿ ಬಿಟ್ಟು ಹೋಗಿದ್ದ ಆರೋಪಿಯ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಚಾರ್ನಿ ರೈಲ್ವೆ ಪೊಲೀಸರಿಂದಲೂ ಮಾಹಿತಿ ಸಂಗ್ರಹಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಹಾವೇರಿಯಲ್ಲಿ ಹೆಂಡತಿ ಕೊಲೆ ಮಾಡಿ ಪತಿ ಆತ್ಮಹತ್ಯೆ: ಪತ್ನಿ ಮೇಲೆ ಪತಿ ಅನುಮಾನ ಪಡುತ್ತಿದ್ದು ಇದರಿಂದ ಇವರಿಬ್ಬರ ಮಧ್ಯೆ ಪ್ರತಿ ದಿನ ಜಗಳ ನಡೆಯುತ್ತಿತ್ತು. ಇದೇ ಜಗಳ 6-06-2023(ಮಂಗಳವಾರ)ರ ಅತಿರೇಕಕ್ಕೆ ಹೋಗಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಬಳಿಕ ಮಾರಕಾಸ್ತ್ರದಿಂದ ಹೆಂಡತಿಯನ್ನ ಪತಿಯು ಹೊಡೆದು ಕೊಲೆ ಮಾಡಿ ನಂತರ ತಾನು ಆತ್ಮಹತ್ಯೆಗೆ ಶರಣಾಗಿದ್ದಾನೆ. ಸ್ಥಳಕ್ಕೆ ಎಸ್ಪಿ ಶಿವಕುಮಾರ್ ಗುಣಾರೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಾವೇರಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಇದನ್ನೂ ಓದಿ:ಲಿವ್ ಇನ್ ರಿಲೇಷನ್​ಶಿಪ್​ನಲ್ಲಿದ್ದ ಮಹಿಳೆಯನ್ನು ತುಂಡು ತುಂಡಾಗಿ ಕತ್ತರಿಸಿದ ಕ್ರೂರಿಗಳು: ಪ್ರೇಮಿ ಸೇರಿ ಇಬ್ಬರು ಪೊಲೀಸ್​ ವಶಕ್ಕೆ

ABOUT THE AUTHOR

...view details