ಮೈಸೂರು: ಡ್ರಗ್ಸ್ ಮಾಫಿಯಾದಲ್ಲಿ ಸ್ಯಾಂಡಲ್ವುಡ್ ಹಾಗೂ ಪ್ರಭಾವಿ ರಾಜಕಾರಣಿಗಳು ಶಾಮೀಲಾಗಿದ್ದು, ಉನ್ನತಮಟ್ಟದ ತನಿಖೆಯಾಗಬೇಕು ಎಂದು ಆಗ್ರಹಿಸಿ ಎಬಿವಿಪಿ ಪ್ರತಿಭಟನೆ ನಡೆಸಿದೆ.
ಡ್ರಗ್ಸ್ ಮಾಫಿಯಾ: ಉನ್ನತಮಟ್ಟದ ತನಿಖೆಗೆ ಎಬಿವಿಪಿ ಆಗ್ರಹ
ಡ್ರಗ್ಸ್ ಜಾಲ ಭೇದಿಸಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಮೈಸೂರಿನಲ್ಲಿ ಎಬಿವಿಪಿ ಕಾರ್ಯರ್ತರು ಪ್ರತಿಭಟನೆ ನಡೆಸಿದ್ದಾರೆ.
ಎಬಿವಿಪಿ ಪ್ರತಿಭಟನೆ
ವಿದ್ಯಾರ್ಥಿ ಪರಿಷತ್ ಸಂಘದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಮುಂದೆ ಡ್ರಗ್ಸ್ ಮಾಫಿಯಾ ವಿರುದ್ಧ ಪ್ರತಿಭಟನೆ ನಡೆಸಿ ಡ್ರಗ್ಸ್ ದಂಧೆಕೋರರ ವಿರುದ್ಧ ಧಿಕ್ಕಾರ ಕೂಗಿದರು.
ಡ್ರಗ್ಸ್ ಮಾಫಿಯಾದಲ್ಲಿ ಸ್ಯಾಂಡಲ್ವುಡ್ ನಂಟಿದೆ. ಸರ್ಕಾರ ಉನ್ನತಮಟ್ಟದ ತನಿಖೆ ಕೈಗೊಂಡು ಸಮಾಜಕ್ಕೆ ಮಾರಕವಾಗಿರುವ ಡ್ರಗ್ಸ್ ಜಾಲವನ್ನು ಕಿತ್ತು ಹಾಕಬೇಕು ಎಂದು ಆಗ್ರಹಿಸಿದ್ದಾರೆ.