ಕರ್ನಾಟಕ

karnataka

ETV Bharat / state

ಬನ್ನೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ - ಲಂಚಕ್ಕೆ ಬೇಡಿಕೆ

25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಿ‌‌.ನರಸೀಪುರ ತಾಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿಯನ್ನು ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

acb-offials-arrest-bannur-municipal-commissioner
ಲಂಚಕ್ಕೆ ಬೇಡಿಕೆ: ಬನ್ನೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ

By

Published : Dec 23, 2020, 7:29 PM IST

ಮೈಸೂರು: ಜಿಲ್ಲೆಯ ತಿ‌‌.ನರಸೀಪುರ ತಾಲೂಕಿನ ಬನ್ನೂರು ಪುರಸಭೆ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಲಂಚಕ್ಕೆ ಬೇಡಿಕೆ: ಬನ್ನೂರು ಪುರಸಭೆ ಮುಖ್ಯಾಧಿಕಾರಿ ಎಸಿಬಿ ಬಲೆಗೆ

ಬನ್ನೂರು ಪುರಸಭೆ ಮುಖ್ಯಾಧಿಕಾರಿ ಪುಷ್ಪಲತಾ, ಆನಂದ್ ಭೋವಿ ಎಂಬುವವರ ಬಳಿ 25 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರಂತೆ. ಈ ಬಗ್ಗೆ ಆನಂದ್ ಬೋವಿ ಎಸಿಬಿಗೆ ದೂರು ನೀಡಿದ್ದರು‌.

ಇಂದು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು, ಪುಷ್ಪಲತಾ ಅವರನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details