ಅಧಿಕ ಆಸ್ತಿ ಹೊಂದಿರುವ ಆರೋಪ : ಮೈಸೂರಿನ ಎಸಿಎಫ್ ಮನೆ ಮೇಲೆ ಎಸಿಬಿ ದಾಳಿ
09:11 December 18
ಅಧಿಕ ಆಸ್ತಿ ಹೊಂದಿರುವ ಆರೋಪದಡಿಯಲ್ಲಿ ಎಸಿಎಫ್ ಶಿವಶಂಕರ್ ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರು :ಬೆಳ್ಳಂಬೆಳಗ್ಗೆ ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ ಆರಂಭಿಸಿದ್ದು, ಅಧಿಕ ಆಸ್ತಿ ಹೊಂದಿರುವ ಆರೋಪದಡಿಯಲ್ಲಿ ಎಸಿಎಫ್ ಶಿವಶಂಕರ್ ಮನೆ ಮೇಲೆ ದಾಳಿ ನಡೆಸಿದ್ದಾರೆ.
ಮೈಸೂರು ಅರಣ್ಯ ಭವನದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿವಶಂಕರ್ ಮನೆ ಸೇರಿ ಏಕಕಾಲದಲ್ಲಿ 5 ಕಡೆ ದಾಳಿ ನಡೆಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ. ನಜರ್ಬಾದ್, ಸರಸ್ವತಿಪುರಂ, ಜೆ ಸಿ ಬಡಾವಣೆ, ಮಳವಳ್ಳಿಯಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.