ಮೈಸೂರು: ಮಹಾನಗರ ಪಾಲಿಕೆಯ ಉಪ ಆಯುಕ್ತರ ಕಚೇರಿ ಮತ್ತು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆ ಉಪ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ
ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಉಪ ಆಯುಕ್ತ ನಾಗರಾಜು ಅವರ ಕಚೇರಿ ಮತ್ತು ಮನೆ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರ ಮನೆ ಮೇಲೆ ಎಸಿಬಿ ದಾಳಿ
ಮೈಸೂರು ಮಹಾನಗರ ಪಾಲಿಕೆಯ ವಲಯ 6ರ ಉಪ ಆಯುಕ್ತ ನಾಗರಾಜು ಮನೆ ಮೇಲೆ ಬೆಂಗಳೂರು ಎಸಿಬಿ ಎಸ್ಪಿ ಮಾರ್ಗದರ್ಶನದಲ್ಲಿ ರಾಮನಗರದ ಡಿವೈಎಸ್ಪಿ ನೇತೃತ್ವದಲ್ಲಿ ಬೆಂಗಳೂರಿನಿಂದ ಬಂದ ತಂಡ ಕುವೆಂಪು ನಗರ ನಿವಾಸ, ಪಾಲಿಕೆಯ 6 ವಲಯ ಕಚೇರಿ ಹಾಗೂ ರಾಮನಗರದ ಸಂಬಂಧಿಕರ ಮನೆಯ ಮೇಲೆ ದಾಳಿ ನಡೆಸಿ ದಾಖಲಾತಿಗಳನ್ನು ಪರಿಶೀಲನೆ ನಡೆಸಿದೆ.
ನಾಗರಾಜು ಮೇಲೆ ಆದಾಯಕ್ಕಿಂತ ಅಧಿಕ ಆಸ್ತಿ ಗಳಿಸಿದ ಆರೋಪದ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬರು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಸಿಬಿ ದಾಳಿ ನಡೆದಿದೆ ಎನ್ನಲಾಗಿದೆ.