ಮೈಸೂರು: ಎರಡು ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ನಡೆದಿದೆ.
ಬೈಕ್ಗಳ ನಡುವೆ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ - mysore accident news
ಹುಣಸೂರು ತಾಲೂಕಿನ ಬಿಳಿಕೆರೆ ಗ್ರಾಮದ ಬಳಿ ಪಲ್ಸರ್ ಬೈಕ್ ಹಾಗೂ ಡಿಯೋ ನಡುವೆ ಅಪಘಾತ ಸಂಭವಿಸಿ, ಇಬ್ಬರು ಮೃತಪಟ್ಟಿದ್ದಾರೆ. ಮತ್ತಿಬ್ಬರು ಗಾಯಗೊಂಡಿದ್ದಾರೆ.
ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು, ಮತ್ತಿಬ್ಬರ ಸ್ಥಿತಿ ಗಂಭೀರ!
ಇಲವಾಲ ಗ್ರಾಮದ ರಾಮಚಂದ್ರ( 22), ನವೀನ್ (24) ವಾಹನ ಅಪಘಾತದಿಂದ ಮೃತಪಟ್ಟವರು. ಕೊಮ್ಮೆಗೌಡ ಕೊಪ್ಪಲು ಗ್ರಾಮದ ಗಿರೀಶ್ ಹಾಗೂ ಕೃಷ್ಣಗೆ ಗಂಭೀರ ಗಾಯವಾಗಿದ್ದು, ಆಂಬ್ಯುಲೆನ್ಸ್ ಮೂಲಕ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆ ತರಲಾಗಿದೆ. ಸದ್ಯ ಈ ಸಂಬಂಧ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.