ಮೈಸೂರು:ಬಸ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲಿ ಮೃತಪಟ್ಟ ಘಟನೆ ಇಲವಾಲ ಬಳಿಯ ಬಸವನಹಳ್ಳಿ ಗೇಟ್ ಸಮೀಪ ನಡೆದಿದೆ.
ಬಸ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು - ಮೈಸೂರು ಅಪಘಾತ ಸುದ್ದಿ
ಇಲವಾಲ ಬಳಿ ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಹಳೇಬೀಡು ನಿವಾಸಿಗಳಾದ ಚೇತನ್ (24) ಮತ್ತು ರವಿಕುಮಾರ್ (20) ಎಂದು ಗುರುತಿಸಲಾಗಿದೆ.
![ಬಸ್- ಬೈಕ್ ನಡುವೆ ಮುಖಾಮುಖಿ ಡಿಕ್ಕಿ: ಇಬ್ಬರು ಯುವಕರು ಸ್ಥಳದಲ್ಲೇ ಸಾವು](https://etvbharatimages.akamaized.net/etvbharat/prod-images/768-512-5056016-thumbnail-3x2-vid.jpg)
ಆ್ಯಕ್ಸಿಡೆಂಟ್
ಬಿಳಿಕೆರೆ ಹೋಬಳಿಯ ಹಳೇಬೀಡು ನಿವಾಸಿಗಳಾದ ಚೇತನ್ (24) ಮತ್ತು ರವಿಕುಮಾರ್ (20) ಎಂಬುವವರು ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೈಕ್ನಲ್ಲಿ ಯುವಕರು ಯಡಹಳ್ಳಿಯಿಂದ ಇಲವಾಲಕ್ಕೆ ತೆರಳುತ್ತಿದ್ದು, ಮಾರ್ಗ ಮಧ್ಯದ ಬಸವನಹಳ್ಳಿ ಗೇಟ್ ಬಳಿ ಬಸ್ ಡಿಕ್ಕಿ ಹೊಡೆದಿದ್ದು, ತೀವ್ರವಾಗಿ ಗಾಯಗೊಂಡು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಇಲವಾಲ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.
ಬಸ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೃತಪಟ್ಟ ಯುವಕರು