ಮೈಸೂರು:ಬೈಕ್ ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಸಾವಿಗೀಡಾಗಿರುವ ಘಟನೆ ಜಿಲ್ಲೆಯ ಎಚ್.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ಬಳಿ ನಡೆದಿದೆ. ಚಿಕ್ಕಕಾಳೇಗೌಡನ ಪುರದ ನಿವಾಸಿಗಳಾದ ಸಣ್ಣಸ್ವಾಮಿ, ಪ್ರಭು, ಮಹೇಶ ಮೃತ ದುರ್ದೈವಿಗಳು. ಹುಣಸೂರು ಕಡೆಯಿಂದ ಎಚ್.ಡಿ.ಕೋಟೆ ಕಡೆಗೆ ಬೈಕ್ನಲ್ಲಿ ಮೂವರು ಬರುತ್ತಿದ್ದರು ಎಂದು ತಿಳಿದುಬಂದಿದೆ.
ಮೈಸೂರಿನಲ್ಲಿ ಬೈಕ್-ಲಾರಿ ನಡುವೆ ಮುಖಾಮುಖಿ ಡಿಕ್ಕಿ: ಮೂವರು ಸಾವು - Mysore accident news
ಮೈಸೂರಿನ ಎಚ್.ಡಿ.ಕೋಟೆ ತಾಲೂಕಿನ ಭೀಮನಹಳ್ಳಿ ಬಳಿ ಬೈಕ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿ ಮೂವರು ಸಾವಿಗೀಡಾಗಿದ್ದಾರೆ.
ಮೈಸೂರು
ಬೈಕ್ನಲ್ಲಿದ್ದ ಮೂವರ ಪೈಕಿ ಇಬ್ಬರು ಸ್ಥಳದಲ್ಲಿ ಮೃತಪಟ್ಟರೆ, ಮತ್ತೋರ್ವ ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾನೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.
ಇದನ್ನೂ ಓದಿ:ಕಾಡಿನಿಂದ ಪಟ್ಟಣಕ್ಕೆ ಬಂದ ಚಿರತೆಗಳು: ಹೆಚ್.ಡಿ.ಕೋಟೆ ವಿಡಿಯೋ