ಮೈಸೂರು: ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ನಲ್ಲಿ ನಡೆದಿದೆ.
ಬೈಕ್ಗಳ ಮುಖಾಮುಖಿ ಡಿಕ್ಕಿ: ಓರ್ವ ಸ್ಥಳದಲ್ಲೇ ಸಾವು - accident in d h kote
ಬೈಕ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವಿಗೀಡಾದ ಘಟನೆ ಎಚ್.ಡಿ. ಕೋಟೆ ತಾಲೂಕಿನ ಹ್ಯಾಂಡ್ ಪೋಸ್ಟ್ನಲ್ಲಿ ನಡೆದಿದೆ.
ಬೈಕ್ಗಳ ಮುಖಾಮುಖಿ ಡಿಕ್ಕಿ
ತಾಲೂಕಿನ ಆನಗಟ್ಟಿ ಗ್ರಾಮದ ನಿವಾಸಿ ಗೋಪಾಲ್ (25) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಬೈಕ್ ಸವಾರ ಎಚ್.ಡಿ.ಕೋಟೆಯ ಹರೀಶ್ (25) ತೀವ್ರವಾಗಿ ಗಾಯಗೊಂಡಿದ್ದು, ಮೈಸೂರಿನ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಸರಗೂರು ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.