ಮೈಸೂರು :ಸಂಚಾರಿ ಪೊಲೀಸ್ ತಪಾಸಣೆ ವೇಳೆ ಹ್ಯಾಂಡಲ್ಗೆ ಲಾಠಿ ಸಿಲುಕಿ ಯುವಕನೋರ್ವ ಮೃತಪಟ್ಟಿದ್ದಾನೆ ಎಂದು ಆರೋಪಿಸಲಾಗಿದೆ. ಯುವಕನ ಸಾವಿಗೆ ಕಾರಣರಾದ ಪೊಲೀಸರಿಗೆ ಸಾರ್ವಜನಿಕರು ಧರ್ಮದೇಟು ನೀಡಿರುವ ಘಟನೆ, ನಗರದ ಹಿನ್ಕಲ್ ನಲ್ಲಿ ನಡೆದಿದೆ.
ವಿವಿ ಪುರಂ ಸಂಚಾರ ಠಾಣೆ ಪೊಲೀಸರು ಹಿನಕಲ್ ರಿಂಗ್ ರಸ್ತೆಯಲ್ಲಿ ತಪಾಸಣೆ ನಡೆಸುತ್ತಿದ್ದಾಗ, ಬೈಕ್ ಸವಾರ ತಪ್ಪಿಸಿಕೊಳ್ಳಲು ಯತ್ನಿಸಿದ್ದು, ಹ್ಯಾಂಡಲ್ಗೆ ಪೊಲೀಸ್ ಲಾಠಿ ಸಿಲುಕಿ ಆಯತಪ್ಪಿ ಬಿದ್ದಿದ್ದಾನೆ ಎಂದು ಆರೋಪಿಸಲಾಗಿದೆ. ಈ ವೇಳೆ ಹಿಂಬದಿಯಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದರಿಂದ ಕೆರಳಿದ ಸಾರ್ವಜನಿಕರು ಪೊಲೀಸ್ ಗಸ್ತು ವಾಹನ ಜಖಂಗೊಳಿಸಿ, ಪೊಲೀಸರನ್ನು ಅಟ್ಟಾಡಿಸಿ ಹೊಡೆದಿದ್ದಾರೆ.