ಮೈಸೂರು:ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ಮಾಡಿರುವ ವ್ಯಕ್ತಿಗಳು ಅಥವಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ತನ್ವೀರ್ ಸೇಠ್ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು: ಖಾದರ್
ಶಾಸಕ ತನ್ವೀರ್ ಸೇಠ್ ಮೇಲೆ ಹಲ್ಲೆ ಮಾಡಿರುವ ವ್ಯಕ್ತಿಗಳು ಅಥವಾ ಸಂಘಟನೆಗಳ ಮೇಲೆ ಕ್ರಮ ಕೈಗೊಳ್ಳಬೇಕೆಂದು ಮಾಜಿ ಸಚಿವ ಹಾಗೂ ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದ ಆಸ್ಪತ್ರೆಗೆ ಭೇಟಿ ನೀಡಿ ತನ್ವೀರ್ ಸೇಠ್ ಆರೋಗ್ಯ ವಿಚಾರಿಸಿದ ಮಾಜಿ ಸಚಿವ ಖಾದರ್ ಮಾಧ್ಯಮದವರೊಂದಿಗೆ ಮಾತನಾಡಿ, ತನ್ವೀರ್ ಸೇಠ್ ಚೇತರಿಸಿಕೊಳ್ಳುತ್ತಿದ್ದಾರೆ. ಇವರ ಮೇಲೆ ಹಲ್ಲೆ ಮಾಡಿದ ವ್ಯಕ್ತಿ ಅಥವಾ ಸಂಘಟನೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಈ ಹಲ್ಲೆಯ ಹಿಂದೆ ಇರುವವರನ್ನು ಪತ್ತೆ ಮಾಡಬೇಕೆಂದು ಆಗ್ರಹಿಸಿದರು.
ಉಪ ಚುನಾವಣೆಯಲ್ಲಿ ಎಲ್ಲಾ ಕಾಂಗ್ರೆಸ್ ಅಭ್ಯರ್ಥಿಗಳನ್ನು ಜನರೇ ಗೆಲ್ಲಿಸಿಕೊಡುತ್ತಾರೆ. ಸುಪ್ರೀಂ ಕೋರ್ಟ್ ಇವರನ್ನು ಅನರ್ಹರು ಎಂದು ಹೇಳಿದೆ. ಆದರೀಗ ಇವರು ಚುನಾವಣೆಯಲ್ಲಿ ಸ್ಪರ್ಧಿಸಿದ್ದು ಬೇರೆ ಬೇರೆ ಆಮಿಷಗಳನ್ನು ತೋರಿಸಿ ಮತ್ತೆ ಆಯ್ಕೆಯಾಗಲು ಯತ್ನಿಸಿದ್ದಾರೆ. ಇವರನ್ನು ಜನರು ಆಯ್ಕೆ ಮಾಡದೆ ತಕ್ಕ ಪಾಠ ಕಲಿಸುತ್ತಾರೆ ಎಂದರು.