ಮೈಸೂರು:ಸ್ವಗ್ರಾಮದಲ್ಲಿ ಮತ ಚಲಾಯಿಸಲು ಬಂದ ಹೆಚ್.ಡಿ.ಕೋಟೆ ಶಾಸಕರನ್ನು ಪೊಲೀಸರು ತಡೆದರು ಎಂದು ಆರೋಪಿಸಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸಿದ ಘಟನೆ ಹುಣಸೂರು ತಾಲ್ಲೂಕಿನ ಹೊಸರಾಮನಹಳ್ಳಿಯಲ್ಲಿ ನಡೆದಿದೆ.
ಹೆಚ್.ಡಿ.ಕೋಟೆಯಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಚಿಕ್ಕಮಾದು ಬೆಂಬಲಿಗರ ಪ್ರತಿಭಟನೆ - ಹೆಚ್.ಡಿ.ಕೋಟೆ ಲೆಟೆಸ್ಟ್ ನ್ಯೂಸ್
ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರ ಸ್ವಗ್ರಾಮ ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ಗ್ರಾಮದ ಮತಗಟ್ಟೆಯಲ್ಲಿ ಮತದಾನ ಮಾಡಿ ಹೊರ ಬರುತ್ತಿದ್ದರು. ಈ ವೇಳೆ ಅಲ್ಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್, ಶಾಸಕರನ್ನು ತಡೆದು ಪ್ರಶ್ನಿಸಿದ್ದಾರೆ. ಪೊಲೀಸ್ ಅಧಿಕಾರಿಯ ನಡೆ ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ.
ಹೆಚ್.ಡಿ.ಕೋಟೆ ಶಾಸಕ ಅನಿಲ್ ಚಿಕ್ಕಮಾದು ಅವರ ಸ್ವಗ್ರಾಮ ಹುಣಸೂರು ತಾಲೂಕಿನ ಹೊಸರಾಮನಹಳ್ಳಿ ಗ್ರಾಮಕ್ಕೆ ಆಗಮಿಸಿದ್ದಾರೆ. ಗ್ರಾಮದ ಮತಗಟ್ಟೆಗೆ ಆಗಮಿಸಿ ಹೊರ ಬರುತ್ತಿದ್ದಂತೆ, ಅಲ್ಲಿದ್ದ ಪೊಲೀಸ್ ಇನ್ಸ್‌ಪೆಕ್ಟರ್ ಶಾಸಕರನ್ನು ತಡೆದು ಪ್ರಶ್ನಿಸಿದ್ದಾರೆ. ಇದರಿಂದ ಕೆರಳಿದ ಶಾಸಕರು ಇನ್ಸ್‌ಪೆಕ್ಟರ್ ಜೊತೆ ಮಾತಿನ ಚಕಮಕಿ ನಡೆಸಿದರು.ಈ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ಶಾಸಕರ ಬೆಂಬಲಿಗರು ಇನ್ಸ್‌ಪೆಕ್ಟರ್ ವಿರುದ್ಧ ಕೋಪತಾಪ ತೋರಿಸಿದ್ರು.
ಈ ವೇಳೆ ಮಾತನಾಡಿದ ಶಾಸಕ ಅನಿಲ್ ಚಿಕ್ಕಮಾದು, ಶಾಸಕರನ್ನೇ ತಡೆದು ಆಡಳಿತ ಪಕ್ಷ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.