ಮೈಸೂರು: ಚಾಮುಂಡಿ ಬೆಟ್ಟದಲ್ಲಿ ದೇವರ ದರ್ಶನಕ್ಕೆ ನಿಷೇಧ ಹೇರಿದ್ದರೂ ನಟ ದರ್ಶನ್ ಚಾಮುಂಡಿ ತಾಯಿಯ ದರ್ಶನ ಪಡೆದಿದ್ದಾರೆ.
ನಿರ್ಬಂಧದ ನಡುವೆಯೂ ಚಾಮುಂಡಿ ತಾಯಿ ದರ್ಶನ ಪಡೆದ ನಟ ದರ್ಶನ್ ಇಂದು ಆಷಾಢ ಮಾಸದ ಮೂರನೇ ಶುಕ್ರವಾರವಾಗಿದ್ದು, ಬೆಳಗ್ಗೆ ಚಾಮುಂಡಿ ಬೆಟ್ಟಕ್ಕೆ ಮೈಸೂರು ಮಹಾನಗರ ಪಾಲಿಕೆಯ ಉಪ ಮೇಯರ್ ಜೊತೆ ಬೆಟ್ಟಕ್ಕೆ ಆಗಮಿಸಿದ ನಟ ದರ್ಶನ್, ಗರ್ಭಗುಡಿಯ ಮುಂಭಾಗದಲ್ಲಿ ಕುಳಿತು ತಾಯಿಗೆ ಪೂಜೆ ಸಲ್ಲಿಸಿದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿ, ಮಾಧ್ಯಮದವರಿಗೆ ಸಾಮಾಜಿಕ ಅಂತರ ಇಲ್ಲವಲ್ಲ ಸರ್ ಎಂದು ಪ್ರಶ್ನಿಸಿದರು, ಕೊರೊನಾದಂತಹ ಇಂತಹ ಪರಿಸ್ಥಿತಿಯಲ್ಲಿ ಉಪ ಮೇಯರ್ ನನ್ನನ್ನು ಜೊತೆಗೆ ಕರೆದುಕೊಂಡು ಬಂದರು ಅಷ್ಟೇ. ಇಲ್ಲಿ ಸಿನಿಮಾ ವಿಚಾರ ಮಾತನಾಡುವುದಿಲ್ಲ ಎಂದರು.
ಸಾರ್ವಜನಿಕರು ಹಾಗೂ ಭಕ್ತರಿಗೆ ನಿಷೇಧ ಹೇರಲಾಗಿದೆ. ಈ ನಡುವೆಯೂ ತಾಯಿ ದರ್ಶನ ಪಡೆದ ನಟ ದರ್ಶನ್ ಅವರ ಈ ನಡೆ ಚರ್ಚೆಗೆ ಗ್ರಾಸವಾಗಿದೆ.