ಮೈಸೂರು: ಸ್ವಾತಂತ್ರ್ಯ ಅಮೃತ ಮಹೋತ್ಸವ ಅಂಗವಾಗಿ ಹರ್ ಘರ್ ತಿರಂಗ ಅಭಿಯಾನದಲ್ಲಿ ದೇಶದ ಹೆಮ್ಮೆಯ ಧ್ವಜ ಹಿಡಿದಿರುವುದಕ್ಕೆ ಮತ್ತು ಇಂತಹ ಕಾರ್ಯಕ್ರಮವನ್ನು ನಮ್ಮೂರಿನಲ್ಲಿ ಆಯೋಜಿಸಿರುವುದಕ್ಕೆ ಸಂತಸವಾಗಿದೆ ಎಂದು ಕನ್ನಡ ಚಲನಚಿತ್ರ ನಟ ಯಶ್ ಹೇಳಿದರು.
ದೇಶದ 75ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಆಚರಣೆ ಮಾಡುತ್ತಿದ್ದೇವೆ. ಆ ಸಂದರ್ಭದಲ್ಲಿ ಪ್ರತಿಯೊಬ್ಬರೂ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ಪಡೆದುಕೊಂಡು, ಸದುಪಯೋಗ ಮಾಡಿಕೊಳ್ಳಬೇಕು. ವಿದ್ಯಾರ್ಥಿಯಾಗಿದ್ದಾಗ ನಾನು ತಂದೆ-ತಾಯಿಯನ್ನು ಖುಷಿಪಡಿಸುವ ಕೆಲಸ ಮಾಡಲಿಲ್ಲ. ಬದಲಾಗಿ ಮೈಸೂರಿನ ಕಾಳಿದಾಸ ರಸ್ತೆ, ಒಂಟಿಕೊಪ್ಪಲ್, ಪಡುವಾರಹಳ್ಳಿ, ಮಾನಸ ಗಂಗೋತ್ರಿಯಲ್ಲಿ ಓಡಾಡಿಕೊಂಡಿದ್ದೆ.