ಮೈಸೂರು:ಅಪರಿಚಿತ ವ್ಯಕ್ತಿಯೊಬ್ಬ ತಮ್ಮ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು, ಆಶ್ಲೀಲ ಸಂದೇಶಗಳನ್ನು ಕಳಿಸುತ್ತಿದ್ದಾರೆ ಎಂದು ನಟಿ ಪವಿತ್ರ ಲೋಕೇಶ್ ಮೈಸೂರಿನ ಸೈಬರ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಅಪರಿಚಿತ ವ್ಯಕ್ತಿಯು ತಮ್ಮ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದಿದ್ದು, ನನ್ನ ಬಗ್ಗೆ ಆಶ್ಲೀಲ ಸಂದೇಶ ಹಾಗೂ ಸುಳ್ಳು ಸುದ್ದಿಗಳನ್ನು ಜಾಲತಾಣಗಳಲ್ಲಿ ಹಾಕಲಾಗತ್ತಿದೆ. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ನಟಿ ಪವಿತ್ರ ಲೋಕೇಶ್ ದೂರಿನಲ್ಲಿ ಆಗ್ರಹಿಸಿದ್ದಾರೆ.