ಮೈಸೂರು:ನಗರದ ವಿವಿ ಪುರಂ ಪೊಲೀಸ್ ಠಾಣೆಗೆ ನಟಿ ಪವಿತ್ರಾ ಲೋಕೇಶ್ ಆಗಮಿಸಿ ದೂರು ನೀಡಿದ್ದಾರೆ. ತಮ್ಮನ್ನು ಯಾರೋ ಹಿಂಬಾಲಿಸುವ ಕುರಿತಾಗಿ ಈ ದೂರು ಕೊಟ್ಟಿದ್ದಾರೆ.
ಕಳೆದ ಕೆಲವು ದಿನಗಳಿಂದ ಸಾಕಷ್ಟು ಸುದ್ದಿಯಲ್ಲಿರುವ ನಟಿ ಪವಿತ್ರಾ ಲೋಕೇಶ್ ಇಂದು ಬೆಂಗಳೂರಿನಿಂದ ಮೈಸೂರಿಗೆ ಆಗಮಿಸುತ್ತಿದ್ದರು. ಈ ವೇಳೆ ಅವರನ್ನ ಕೆಲವರು ಹಿಂಬಾಲಿಸಿದ್ದಾರೆ ಎನ್ನಲಾಗ್ತಿದೆ. ಹೀಗಾಗಿ ಮೈಸೂರಿಗೆ ಆಗಮಿಸಿದ ತಕ್ಷಣವೇ ಅವರು ನಗರದ ವಿವಿ ಪುರಂ ಠಾಣೆಗೆ ಹೋಗಿ ದೂರು ನೀಡಿದ್ದಾರೆ. ನಂತರ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡದೆ ಅವರು ಹೊರಟು ಹೋದರು.