ಕರ್ನಾಟಕ

karnataka

ETV Bharat / state

ಕೋವಿಡ್ ಮಾದರಿ ಸಂಗ್ರಹಕ್ಕೆ ಹೆಚ್ಚುವರಿ 25 ತಂಡಗಳ ವ್ಯವಸ್ಥೆ: ಡಿಸಿ ಸಿಂಧೂರಿ ಸೂಚನೆ

ಕೋವಿಡ್ ಪರೀಕ್ಷೆಗೆ ಮೈಸೂರು ಜಿಲ್ಲೆಯಲ್ಲಿ 70 ಸ್ಥಾಯಿ ತಂಡಗಳು ಹಾಗೂ 30 ಸಂಚಾರಿ ತಂಡಗಳ ಜೊತೆಗೆ ಇನ್ನೂ 25 ತಂಡಗಳಿಗೆ ಬೇಕಾದ ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಡೇಟಾ ಎಂಟ್ರಿ ಆಪರೇಟರ್​ಗಳನ್ನು ನಿಯೋಜಿಸಿಕೊಳ್ಳಲು ನೂತನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅನುಮತಿ ನೀಡಿದರು.

By

Published : Sep 29, 2020, 7:19 PM IST

ಡಿಸಿ ರೋಹಿಣಿ ಸಿಂಧೂರಿ
ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರು ಜಿಲ್ಲಾಧಿಕಾರಿಯಾಗಿ ಮಂಗಳವಾರ ಅಧಿಕಾರ‌ ವಹಿಸಿಕೊಂಡ ರೋಹಿಣಿ ಸಿಂಧೂರಿ ಅವರು‌ ಜಿಲ್ಲೆಯಲ್ಲಿ ಕೋವಿಡ್ ಸ್ಥಿತಿಗತಿ ಹಾಗೂ ದಸರಾ ಸಿದ್ಧತೆ ಬಗ್ಗೆ ಮಾಹಿತಿ ಪಡೆದರು.

ಕೋವಿಡ್ ಪರೀಕ್ಷೆಗೆ ಜಿಲ್ಲೆಯಲ್ಲಿ 70 ಸ್ಥಾಯಿ ತಂಡಗಳು ಹಾಗೂ 30 ಸಂಚಾರಿ ತಂಡಗಳು ಕೆಲಸ ಮಾಡುತ್ತಿವೆ. ಇನ್ನೂ ಹೆಚ್ಚಿನ ತಂಡಗಳ ನಿಯೋಜನೆಗೆ ಆರೋಗ್ಯ ಇಲಾಖೆ ಅಧಿಕಾರಿಗಳು ಅನುಮತಿ ಕೋರಿದರು. ಈ ಹಿನ್ನೆಲೆಯಲ್ಲಿ ಈಗಿರುವ 30 ಸಂಚಾರಿ ತಂಡಗಳ ಜೊತೆಗೆ ಇನ್ನೂ 25 ತಂಡಗಳಿಗೆ ಬೇಕಾದ ಲ್ಯಾಬ್ ಟೆಕ್ನಿಷಿಯನ್ಸ್ ಹಾಗೂ ಡೇಟಾ ಎಂಟ್ರಿ ಆಪರೇಟರ್​ಗಳನ್ನು ನಿಯೋಜಿಸಿಕೊಳ್ಳಲು ನೂತನ ಜಿಲ್ಲಾಧಿಕಾರಿಗಳು ಅನುಮತಿ ನೀಡಿದರು.

ಮಾದರಿ ಸಂಗ್ರಹಕ್ಕೆ ಬೇಕಾದ ವಿಟಿಎಂ ಉಪಕರಣಗಳು ಆರೋಗ್ಯ ಇಲಾಖೆಯಿಂದ ಬರುವುದು ತಡವಾಗಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಅನುದಾನದಲ್ಲೇ 20 ಸಾವಿರ ವಿಟಿಎಂ ಉಪಕರಣಗಳನ್ನು ‌ಖರೀದಿಸಿ ಆರೋಗ್ಯ ಇಲಾಖೆಗೆ ನೀಡುವಂತೆ ತಿಳಿಸಿದರು. ಕೋವಿಡ್​ನಿಂದಾಗುವ ಸಾವಿನ ಪ್ರಮಾಣ ಕಡಿಮೆ ಮಾಡಲು ಎಲ್ಲ ರೀತಿಯ ಮುಂಜಾಗ್ರತೆ ಕಮಗಳನ್ನು ವಹಿಸುವಂತೆ ತಿಳಿದರು.

ಕೋವಿಡ್ ನಿಯಂತ್ರಣಕ್ಕಾಗಿ ನಿಯೋಜಿಸಿರುವ ಎಲ್ಲ ನೋಡಲ್ ಅಧಿಕಾರಿಗಳ ಸಭೆಯನ್ನೂ ಆದಷ್ಟು ಬೇಗ ಕರೆಯುವಂತೆ ಸೂಚಿಸಿದರು.

ABOUT THE AUTHOR

...view details