ಮೈಸೂರು :ದಸರಾ ಉದ್ಘಾಟಕರ ಆಯ್ಕೆ ವಿಚಾರವಾಗಿ ಮೈಸೂರು ಜಿಲ್ಲಾಡಳಿತದಿಂದ ಯಾವುದೇ ಪಟ್ಟಿ ಕಳುಹಿಸಿಲ್ಲ. ಈ ಬಗ್ಗೆ ಮುಖ್ಯಮಂತ್ರಿಗಳು ತೀರ್ಮಾನ ಕೈಗೊಳ್ಳುತ್ತಾರೆ ಎಂದು ಜಿಲ್ಲಾಧಿಕಾರಿ ಡಾ. ಗೌತಮ್ ಬಗಾದಿ ಸ್ಪಷ್ಟಪಡಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಆನೆಗಳಿಗೆ ಅರಮನೆ ಆವರಣ ಬಿಟ್ಟು ಜಂಬೂಸವಾರಿ ಮಾರ್ಗದಲ್ಲಿ ತಾಲೀಮು ವಿಚಾರವಾಗಿ ಹೈಪವರ್ ಕಮಿಟಿಯಲ್ಲಿ ಈ ಬಗ್ಗೆ ಚರ್ಚಿಸಲಾಗುವುದು. ಅರಣ್ಯ ಇಲಾಖೆಯ ಅಧಿಕಾರಿಗಳ ಜೊತೆ ಮಾತುಕತೆ ಬಳಿಕ ಹೈಪವರ್ ಕಮಿಟಿಯಲ್ಲಿ ನಿರ್ಧಾರ ಮಾಡಲಾಗುವುದು ಎಂದರು.