ಮೈಸೂರು :ಬೆಳೆ ನಷ್ಟ ಪರಿಹಾರ ವಿಚಾರದಲ್ಲಿ ನಮ್ಮಿಂದ ಎಷ್ಟು ಸಾಧ್ಯವೋ, ಅಷ್ಟು ಸಹಾಯ ಮಾಡ್ತಿದ್ದೇವೆ. ಎಷ್ಟು ಅನುದಾನ ಕೊಡಲು ಸಾಧ್ಯವೋ ಅಷ್ಟೂ ಪ್ರಯತ್ನ ಮಾಡಿದ್ದೇವೆ. ಅದಕ್ಕೂ ಮೀರಿ ಕೊಡಲು ಸಾಧ್ಯವೇ ಎಂದು ರಾಜ್ಯ ಸರ್ಕಾರ ಆರ್ಥಿಕತೆ ಅಸಹಾಯಕತೆಯನ್ನು ಕೃಷಿ ಸಚಿವ ಬಿ ಸಿ .ಪಾಟೀಲ್ ತೆರೆದಿಟ್ಟಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯದ ವಿಜ್ಞಾನ ಭವನದಲ್ಲಿ ನಡೆದ ಮೈಸೂರು ವಿಭಾಗೀಯ ಎಂಟು ಜಿಲ್ಲೆಗಳ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಬೆಳೆ ನಾಶ ಪರಿಹಾರಕ್ಕೆ ಸಂಬಂಧಿಸಿದಂತೆ ರೈತರಿಗೆ ರಾಜ್ಯ ಸರ್ಕಾರ ಅಗತ್ಯಕ್ಕೆ ಸಹಾಯ ಮಾಡುತ್ತಿದೆ.
ಎಲ್ಲರಿಗೂ ಒಂದೇ ರೀತಿಯ ಪರಿಹಾರ ನೀಡಲು ಸಾಧ್ಯವಿಲ್ಲ. ಕೊರೊನಾ ಹಿನ್ನೆಲೆ ರಾಜ್ಯ ಸರ್ಕಾರ ವಿವಿಧ ವಲಯಗಳಿಗೆ 1,610 ಕೋಟಿ ರೂ. ನೀಡಿದೆ ಎಂದರು. ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರೊತೆ ಇದೆ. ಅಗತ್ಯ ಸೇವೆಗೆ ತಕ್ಕಂತೆ ಸಿಬ್ಬಂದಿ ನೇಮಕಕ್ಕೆ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಬಿಎಸ್ವೈ ಗಮನಕ್ಕೆ ತರಲಾಗುವುದು ಎಂದು ಹೇಳಿದರು.