ಮೈಸೂರು: ರಾಜಕೀಯವಾಗಿ ಮೂಲೆಗುಂಪಾಗಿರುವವರು ತಮ್ಮ ಅಸ್ತಿತ್ವಕ್ಕಾಗಿ ಅಹಿಂದ ಹೋರಾಟದ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಸಚಿವ ಎಸ್.ಟಿ. ಸೋಮಶೇಖರ್ ವ್ಯಂಗ್ಯವಾಗಿ ಸಿದ್ದರಾಮಯ್ಯ ಹಾಗೂ ಮಹದೇವಪ್ಪ ಅವರ ಬಗ್ಗೆ ಪರೋಕ್ಷವಾಗಿ ಟೀಕಿಸಿದ್ದಾರೆ.
ಸಿದ್ದರಾಮಯ್ಯ, ಹೆಚ್ ಸಿ ಮಹದೇವಪ್ಪ ಕುರಿತು ಸಚಿವ ಎಸ್.ಟಿ. ಸೋಮಶೇಖರ್ ಪರೋಕ್ಷವಾಗಿ ವ್ಯಂಗ್ಯ ಇಂದು ಪತ್ರಕರ್ತರ ಭವನದಲ್ಲಿ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಈ ಬಜೆಟ್ನಲ್ಲಿ ರಾಜ್ಯಕ್ಕೆ ನೀಡಿರುವ ಕೊಡುಗೆಗಳನ್ನು ವಿವರಿಸಿದರು. ವಿಧಾನಸಭೆ ಚುನಾವಣೆ ಇನ್ನೂ ದೂರ ಇದೆ. ಹಾಗಾಗಿ ಸದ್ಯಕ್ಕೆ ಅಹಿಂದ ಹೋರಾಟ ಅಪ್ರಸ್ತುತ ಎಂದು ವ್ಯಂಗ್ಯವಾಡಿದರು.
ಸಿದ್ದರಾಮಯ್ಯರ ಬಗ್ಗೆ ನನಗೆ ವೈಯಕ್ತಿಕವಾಗಿ ವಿಶ್ವಾಸವಿದೆಯೇ ಹೊರತು ರಾಜಕೀಯವಾಗಿ ಅಲ್ಲ. ನಾನು ಅವರ ಜೊತೆ 5 ವರ್ಷ ಶಾಸಕನಾಗಿ ಕೆಲಸ ಮಾಡಿದ್ದೆ ಎಂದರು.
ಈ ಸುದ್ದಿಯನ್ನೂ ಓದಿ:ವೀರಶೈವ ಲಿಂಗಾಯತ ಮಠಾಧೀಶರ ಸಭೆ: ಎಲ್ಲ ಒಳಪಂಗಡಗಳನ್ನು ಒಬಿಸಿಗೆ ಸೇರಿಸುವಂತೆ ಆಗ್ರಹ
ಸತತವಾಗಿ ಅಗತ್ಯವಾದ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಕೊರೊನಾದಿಂದ ದೇಶದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಅದನ್ನು ಸರಿಪಡಿಸಲು ಸೆಸ್ ಹಾಕಲಾಗುತ್ತಿದೆ ಎಂದು ಸಮರ್ಥನೆ ನೀಡಿದರು.
ಈ ಬಾರಿ ರಾಜ್ಯ ಬಜೆಟ್ನಲ್ಲಿ ಮೈಸೂರಿಗೆ ಹೆಚ್ಚಿನ ಕೊಡುಗೆ ನೀಡಲು, ಇಂದು ಮೈಸೂರಿಗೆ ಆಗಮಿಸುವ ಮುಖ್ಯಮಂತ್ರಿ ಜೊತೆ ಮಾತುಕತೆ ನಡೆಸುತ್ತೇವೆ ಎಂದರು. ಮೈಸೂರು ಪಾಲಿಕೆಯಲ್ಲಿ ಈ ಬಾರಿ ಮೈತ್ರಿ ಮಾಡಿಕೊಂಡು, ಬಿಜೆಪಿ ಮೇಯರ್ ಸ್ಥಾನ ಪಡೆಯಲು ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷರ ಜೊತೆ ಇಲ್ಲಿನ ಸ್ಥಳೀಯ ನಾಯಕರು ಚರ್ಚೆ ನಡೆಸುತ್ತಿದ್ದಾರೆ ಎಂದು ತಿಳಿಸಿದರು.