ಮೈಸೂರು:ರೋಗಿಯನ್ನು ಕರೆತರಲು ಹೋಗುತ್ತಿದ್ದ ಆ್ಯಂಬುಲೆನ್ಸ್ ರಸ್ತೆ ಡಿವೈಡರ್ಗೆ ಡಿಕ್ಕಿ ಹೊಡೆದ ಘಟನೆ ಮಧ್ಯರಾತ್ರಿ ಹೆಚ್.ಡಿ. ಕೋಟೆ ತಾಲೂಕಿನ ಮನಂದವಾಡಿ ರಸ್ತೆಯಲ್ಲಿ ಸಂಭವಿಸಿದೆ.
ಹೆಚ್.ಡಿ. ಕೋಟೆ ಸರ್ಕಾರಿ ಆಸ್ಪತ್ರೆಗೆ ಸೇರಿದ ಆ್ಯಂಬುಲೆನ್ಸ್ ಮಧ್ಯರಾತ್ರಿ ನೂರಲಕುಪ್ಪೆ ಗ್ರಾಮದ ರೋಗಿಯನ್ನು ಕರೆದುಕೊಂಡು ಬರಲು ವೇಗವಾಗಿ ಹೋಗುತ್ತಿರುವ ಸಂದರ್ಭದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಡಿವೈಡರ್ ಹಾಗೂ ರಸ್ತೆ ಬದಿಯ ಕಂಬಗಳಿಗೆ ಡಿಕ್ಕಿ ಹೊಡೆದಿದೆ. ಈ ವೇಳೆ ಆ್ಯಂಬುಲೆನ್ಸ್ನ ಮುಂಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಘಟನೆಯಲ್ಲಿ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ.