ಮೈಸೂರು:ಆನಂದ್ ಸಿಂಗ್ ಮಂತ್ರಿಯಾದ ಮಾತ್ರಕ್ಕೆ ಪ್ರಕರಣಗಳನ್ನು ಮುಚ್ಚಿ ಹಾಕಲು ಸಾಧ್ಯವಿಲ್ಲ. ಈ ಕುರಿತು ಮುಖ್ಯಮಂತ್ರಿಗಳಿಗೆ ಮಾಹಿತಿ ಇದೆ ಎಂದು ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.
ಸಹಕಾರ ಇಲಾಖೆ ಸಚಿವ ಎಸ್.ಟಿ.ಸೋಮಶೇಖರ್ ಚಾಮುಂಡೇಶ್ವರಿ ಬೆಟ್ಟಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಆನಂದ್ ಸಿಂಗ್ ಅವರಿಗೆ ಅರಣ್ಯ ಖಾತೆ ನೀಡಿರುವುದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಕಟುಕನ ಕೈಗೆ ಕುರಿ ಕೊಟ್ಟಂತೆ ಎಂದು ಅನೇಕರು ಸರ್ಕಾರದ ನಡೆಯನ್ನು ಟೀಕೆ ಮಾಡಿದ್ದರು. ಸಿಂಗ್ ವಿರುದ್ಧ ಈಗಾಗಲೇ ಅರಣ್ಯ ಪ್ರದೇಶವನ್ನು ಒತ್ತುವರಿ ಮಾಡಿಕೊಂಡಿರುವ ಬಗ್ಗೆ ಗಂಭೀರ ಸ್ವರೂಪದ ಆರೋಪಗಳಿವೆ.
ಕಂದಾಯ ಸಚಿವ ಅಶೋಕ್ ಪುತ್ರನ ಪ್ರಕರಣ ವಿಚಾರದಲ್ಲಿ ಅಶೋಕ್ ಈಗಾಗಲೇ ಹೇಳಿಕೆ ಕೊಟ್ಟಿದ್ದಾರೆ. ಆ ಬಗ್ಗೆ ಹೆಚ್ಚಿನ ಮಾಹಿತಿಯಿಲ್ಲ ಎಂದರು.