ಮೈಸೂರು: ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಶಿಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು)ದ ಸದಸ್ಯರು ನಗರದಲ್ಲಿ ಪ್ರತಿಭಟನೆ ನಡೆಸಿದ್ರು.
ಅಂಗನವಾಡಿಯಲ್ಲಿ ಶಾಲಾಪೂರ್ವ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ - Mysore news
ಅಂಗನವಾಡಿ ಕೇಂದ್ರಗಳಲ್ಲಿ ಎಲ್ಕೆಜಿ ಹಾಗೂ ಯುಕೆಜಿ ಶಿಕ್ಷಣ ಒದಗಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ (ಸಿಐಟಿಯು) ನಗರದಲ್ಲಿ ಪ್ರತಿಭಟನೆ ನಡೆಸಿತು.
![ಅಂಗನವಾಡಿಯಲ್ಲಿ ಶಾಲಾಪೂರ್ವ ಶಿಕ್ಷಣ ಒದಗಿಸುವಂತೆ ಒತ್ತಾಯಿಸಿ ಪ್ರತಿಭಟನೆ ಅಂಗಡಿವಾಡಿ ಕಾರ್ಯಕರ್ತೆಯರ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-5290014-thumbnail-3x2-dr.jpg)
ಗೌನ್ ಹೌಸ್ ವೃತ್ತದ ಬಳಿ ಜಮಾಯಿಸಿದ ಅಂಗಡಿವಾಡಿ ಕಾರ್ಯಕರ್ತೆಯರು, ಅಂಗನವಾಡಿಯ ವೇಳಾಪಟ್ಟಿಯಲ್ಲಿ ಶಾಲಾಪೂರ್ವ ಶಿಕ್ಷಣಕ್ಕೆ ಆದ್ಯತೆ ನೀಡಬೇಕು, ಮಾತೃಪೂರ್ಣ ಯಶಸ್ವಿ ಮಾಡಲು ಹೆಚ್ಚುವರಿ ಸಹಾಯಕಿ ಒದಗಿಸಬೇಕು, ಜೊತೆಗೆ ಗುಣಾತ್ಮಕ ಮೂಲಭೂತ ಸೌಲಭ್ಯಗಳನ್ನು ಒದಗಿಸಬೇಕು ಎಂದು ಒತ್ತಾಯಿಸಿದರು.
ಐಸಿಡಿಎಸ್ ಯೋಜನೆಯಡಿ 6 ಉದ್ದೇಶಗಳನ್ನು ಬಿಟ್ಟು ಉಳಿದ ಯಾವುದೇ ಕೆಲಸವನ್ನು ಅಂಗನವಾಡಿ ನೌಕರರರಿಂದ ಮಾಡಿಸಬಾರದು, ನಿವೃತ್ತರಾದ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಇಡುಗಂಟು ಹಣವನ್ನು ತಕ್ಷಣ ಬಿಡುಗಡೆ ಮಾಡಬೇಕು. ನಿವೃತ್ತಿಯಾದವರಿಗೆ ಕನಿಷ್ಠ 6ಸಾವಿರ ರೂ. ಪಿಂಚಣಿ ನೀಡಬೇಕು ಎಂಬ ಬೇಡಿಕೆಗಳನ್ನು ಪ್ರತಿಭಟನಾಕಾರರು ಸರ್ಕಾರದ ಮುಂದಿಟ್ಟರು.