ಮೈಸೂರು:ಸಾಂಸ್ಕೃತಿಕ ನಗರಿಯಲ್ಲಿ ಅನುಮಾನಾಸ್ಪದ ಸೂಟ್ಕೇಸ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿದೆ. ಸ್ಥಳಕ್ಕೆ ಬಾಂಬ್ ಪತ್ತೆ ದಳ ಆಗಮಿಸಿ ಪರಿಶೀಲನೆ ನಡೆಸುತ್ತಿದೆ.
ಮೈಸೂರಿನಲ್ಲಿ ಅನುಮಾನಾಸ್ಪದ ಸೂಟ್ಕೇಸ್ ಪತ್ತೆ : ಆತಂಕಗೊಂಡ ಜನ - mysore suit case found case
ಮೈಸೂರಿನಲ್ಲಿ ಅನುಮಾನಾಸ್ಪದ ಸೂಟ್ಕೇಸ್ ಪತ್ತೆಯಾಗಿದ್ದು ಜನರು ಆತಂಕಕ್ಕೀಡಾಗಿದ್ದಾರೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದ್ದು, ಬಾಂಬ್ ಪತ್ತೆ ದಳದಿಂದ ಪರಿಶೀಲನೆ ನಡೆಯುತ್ತಿದೆ.
ಅನುಮಾನಾಸ್ಪದ ಸೂಟ್ಕೇಸ್ ಪತ್ತೆ
ನಗರದ ನಾರಾಯಣ ಶಾಸ್ತ್ರಿ ರಸ್ತೆಯ ಸಿದ್ದಪ್ಪ ವೃತ್ತದ ಬಳಿ ಇರುವ ಬ್ಯಾಂಕ್ನ ಎಟಿಎಂ ಮುಂದೆ ಸಂಜೆಯಿಂದಲೇ ಸೂಟ್ಕೇಸ್ ಕಂಡುಬಂದಿದೆ. ಸಾರ್ವಜನಿಕರು ಲಕ್ಷ್ಮೀಪುರಂ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದರು.
ಸ್ಥಳಕ್ಕೆ ಪೊಲೀಸರು, ಬಾಂಬ್ ಪತ್ತೆ ದಳ ಆಗಮಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಇದ್ದು, ಸ್ಥಳೀಯರು ಆತಂಕಗೊಂಡಿದ್ದಾರೆ.
Last Updated : Jan 25, 2021, 11:15 PM IST