ಕರ್ನಾಟಕ

karnataka

ತಿ.ನರಸೀಪುರದಲ್ಲಿ ಚಿರತೆ ದಾಳಿಗೆ ಮತ್ತೊಂದು ಬಲಿ

By

Published : Dec 1, 2022, 9:03 PM IST

ಮೈಸೂರು ಜಿಲ್ಲೆಯ ತಿ ನರಸೀಪುರ ತಾಲೂಕಿನ ಎಸ್ ಕೆಬ್ಬೆಹುಂಡಿ ಗ್ರಾಮದ ಮೇಘನಾ (22) ಎಂಬ ಯುವತಿ ಚಿರತೆ ದಾಳಿಗೆ ಬಲಿಯಾಗಿದ್ದಾಳೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

ಮೇಘನಾ (22)
ಮೇಘನಾ (22)

ಮೈಸೂರು: ತಿಂಗಳ ಹಿಂದೆಯಷ್ಟೇ ಚಿರತೆ ದಾಳಿಯಿಂದ ಎಂ ಎಲ್ ಹುಂಡಿಯ ಯುವಕನೊಬ್ಬ ಬಲಿಯಾದ ನೆನಪು ಮಾಸುವ ಮುನ್ನವೇ, ಚಿರತೆ ಮತ್ತೊಂದು ಬಲಿ ಪಡೆದಿದೆ.

ತಿ ನರಸೀಪುರ ತಾಲೂಕಿನ ಎಸ್ ಕೆಬ್ಬೆಹುಂಡಿ ಗ್ರಾಮದ ಮೇಘನಾ (22) ಚಿರತೆ ದಾಳಿಗೆ ಬಲಿಯಾದ ಯುವತಿ‌. ಹಿತ್ತಲಿಗೆ ಹೋಗಿದ್ದ ಸಮಯದಲ್ಲಿ ಚಿರತೆ ದಾಳಿ ನಡೆಸಿದೆ. ಹೆಚ್ಚಿನ ಚಿಕಿತ್ಸೆಗಾಗಿ ಯುವತಿಯನ್ನು ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಯುವತಿ ಮೃತಪಟ್ಟಿದ್ದಾಳೆ.

ಚಿರತೆ ಹಿಡಿಯುವಂತೆ ಸಾರ್ವಜನಿಕರು ಹಲವು ಬಾರಿ ಮನವಿ ಮಾಡಿದರೂ, ಅರಣ್ಯ ಇಲಾಖೆ ನಿರ್ಲಕ್ಷ್ಯದಿಂದ ಈಗ ಮತ್ತೊಂದು ಬಡಜೀವ ಕಳೆದುಕೊಂಡಂತಾಗಿದೆ. ಕಳೆದ ತಿಂಗಳಷ್ಟೇ ಚಿರತೆ ದಾಳಿಯಿಂದ ಯುವಕ ಸಾವನ್ನಪ್ಪಿದ್ದು, ಈಗ ಯುವತಿಯ ಬಲಿ ಪಡೆದಿದೆ. ಚಿರತೆಯಿಂದ ನಿರಂತರ ದಾಳಿ ನಡೆಯುತ್ತಿದ್ದರೂ ಚಿರತೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಮತ್ತು ತಾಲೂಕು ಆಡಳಿತ ವಿಫಲವಾಗಿದೆ ಎಂದು ಆಕ್ರೋಶಗೊಂಡ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಸ್ಥಳಕ್ಕೆ ಶಾಸಕರು ಭೇಟಿ ನೀಡಿ ದುರ್ಘಟನೆಗೆ ಸಂತಾಪ ಸೂಚಿಸಿದರು. ಸ್ಥಳದಲ್ಲೇ ಪ್ರತಿಭಟನಾ ನಿರತರ ಜೊತೆ ಧರಣಿಗೆ ಕುಳಿತ ಶಾಸಕರು ಸ್ಥಳಕ್ಕೆ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಬೇಕು ಎಂದು ಪಟ್ಟುಹಿಡಿದರು. ಸ್ಥಳದಲ್ಲಿ ಡಿವೈಎಸ್​ಪಿ ಗೋವಿಂದರಾಜು, ಪಿಎಸ್ಐ ತಿರುಮಲ್ಲೇಶ್ ಡಾ. ಭಾರತಿ, ಡಾ. ರೇವಣ್ಣ ಇತರರು ಹಾಜರಿದ್ದರು.

ಓದಿ:ಹಾಡಹಗಲೇ ಕೆ ಆರ್ ನಗರದ ಬಡಾವಣೆಗೆ ನುಗ್ಗಿ ಚಿರತೆ ದಾಳಿ: ವಿಡಿಯೋ

ABOUT THE AUTHOR

...view details