ಬೆಂಗಳೂರು: ಮೈಸೂರಿನ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದಿಂದ ಅಪ್ರೆಂಟಿಸ್ ಟ್ರೈನಿಂಗ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ. ಪದವೀಧರ ಮತ್ತು ಡಿಪ್ಲೊಮಾ ಇಂಜಿನಿಯರಿಂಗ್ 200 ಅಪ್ರೆಂಟಿಸ್ ಹುದ್ದೆಗಳು ಇವಾಗಿವೆ. ಈ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಮಾತ್ರ ಆಯ್ಕೆ ಮಾಡಲಾಗುತ್ತದೆ.
ಹುದ್ದೆಗಳ ವಿವರ:
- ಪದವೀಧರ ಅಪ್ರೆಂಟಿಸ್ - 80
- ಟೆಕ್ನಿಶಿಯನ್ (ಡಿಪ್ಲೊಮಾ) ಅಪ್ರೆಂಟಿಸ್ - 55
- ನಾನ್ ಇಂಜಿನಿಯರಿಂಗ್ ಅಪ್ರೆಂಟಿಸ್ - 65
ವಿದ್ಯಾರ್ಹತೆ:ಪದವೀಧರ ಅಪ್ರೆಂಟಿಸ್ ಹುದ್ದೆಗಳಿಗೆ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಸಿವಿಲ್ ಇಂಜಿನಿಯರಿಂಗ್ ಪದವಿ ಹೊಂದಿರಬೇಕು. ಟೆಕ್ನಿಶಿಯನ್ (ಡಿಪ್ಲೊಮಾ) ಅಪ್ರೆಂಟಿಸ್ ಹುದ್ದೆಗೆ ಅಭ್ಯರ್ಥಿಗಳು ಎಲೆಕ್ಟ್ರಿಕಲ್ ಆ್ಯಂಡ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ಮತ್ತು ಸಿವಿಲ್ ಇಂಜಿನಿಯರಿಂಗ್ನಲ್ಲಿ ಡಿಪ್ಲೊಮಾ ಪೂರೈಸಿರಬೇಕು. ನಾನ್ ಇಂಜಿನಿಯರಿಂಗ್ ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬಿಕಾಂ, ಬಿಬಿಎ, ಬಿಸಿಎ, ಬಿಎ, ಬಿಎಸ್ಸಿ ಪೂರ್ಣಗೊಳಿಸಿರಬೇಕು.
ವಯೋಮಿತಿ: 2019, 2020, 2021, 2022 ಮತ್ತು 2023ರಲ್ಲಿ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಕೆಗೆ ಅರ್ಹರು. ಈಗಾಗಲೇ ನಿಗಮದಲ್ಲಿ ಒಂದು ವರ್ಷ ಅಪ್ರೆಂಟಿಸ್ ಆಗಿ ಸೇವೆ ಸಲ್ಲಿಸಿದವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುವುದಿಲ್ಲ.