ಮೈಸೂರು: ನಿನ್ನೆ ನಡೆದ ರಾಜ್ಯ ಸಂಪುಟ ಸಭೆಯಲ್ಲಿ ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆಯ ಶಾಖೆ ತೆರೆಯಲು 50 ಕೋಟಿ ರೂ. ಬಿಡುಗಡೆಗೆ ಒಪ್ಪಿಗೆ ನೀಡಲಾಗಿದೆ. ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಕಟ್ಟಡ ನಿರ್ಮಾಣಕ್ಕೆ ಸ್ಥಳ ಹಾಗೂ ಕಟ್ಟಡ ರಚನೆಗೆ ಸರ್ಕಾರ ಅನುದಾನ ಒದಗಿಸಲಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ವೈದ್ಯಕೀಯ ಖಾತೆ ಸಚಿವ ಡಾ.ಕೆ.ಸುಧಾಕರ್ ಹಾಗೂ ಶಾಸಕ ನಾಗೇಂದ್ರ ಅವರಿಗೆ ಸಂಸದ ಪ್ರತಾಪ್ ಸಿಂಹ ಧನ್ಯವಾದ ಸಲ್ಲಿಸಿದ್ದಾರೆ.
ಮೈಸೂರಿನಲ್ಲಿ ಕಿದ್ವಾಯಿ ಆಸ್ಪತ್ರೆ ಶಾಖೆ ತೆರೆಯಲು ಸರ್ಕಾರ ಅನುಮೋದನೆ
ಕ್ಯಾನ್ಸರ್ ರೋಗಿಗಳ ಚಿಕಿತ್ಸೆಗಾಗಿ ಮೈಸೂರಿನಲ್ಲಿ ಕಿದ್ವಾಯಿ ಸ್ಮಾರಕ ಗ್ರಂಥಿ ಸಂಸ್ಥೆಯ ಕಟ್ಟಡ ನಿರ್ಮಿಸಲು ಸ್ಥಳ ಹಾಗೂ 50 ಕೋಟಿ ರೂ.ಅನುದಾನ ನೀಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಯಿತು.
ಕಿದ್ವಾಯಿ ಆಸ್ಪತ್ರೆ ಶಾಖೆ ತೆರೆಯಲು ಅನುಮೋದನೆ
ಈ ಸಂಬಂಧ ಸರ್ಕಾರದಲ್ಲಿರುವ ಕಡತವನ್ನು ತ್ವರಿತವಾಗಿ ಮುಂದಿನ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ನೀಡುವಂತೆ ಅ.27 ರಂದು ಮೈಸೂರಿಗೆ ಆಗಮಿಸಿದ್ದ ಸಚಿವ ಡಾ.ಕೆ ಸುಧಾಕರ್ ಅವರನ್ನು ಪ್ರತಾಪ್ ಸಿಂಹ ಭೇಟಿ ಮಾಡಿ ಮನವಿ ಮಾಡಿದ್ದರು.
ಇದನ್ನೂ ಓದಿ:ಬೆಳಗಾವಿಯಲ್ಲಿ 130 ಕೋಟಿ ವೆಚ್ಚದಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆ: ಶೀಘ್ರ ಶಂಕುಸ್ಥಾಪನೆ