ಮೈಸೂರು: ಇಂದು ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಹಾಗೂ ಗಾಯಕ ವಿಜಯ್ ಪ್ರಕಾಶ್ ಅವರು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಚಾಮುಂಡೇಶ್ವರಿಯ ದರ್ಶನ ಪಡೆದ ಅರ್ಜುನ್ ಜನ್ಯ, ವಿಜಯ್ ಪ್ರಕಾಶ್ - ಅರ್ಜುನ್ ಜನ್ಯಾ ಸುದ್ದಿ
ಸ್ಯಾಂಡಲ್ ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಮತ್ತು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು ಇಂದು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಗೆ ಪೂಜೆ ಸಲ್ಲಿಸಿದರು.
Vijay Prakash
ಲಾಕ್ ಡೌನ್ ಸಡಿಲಿಕೆ ಮಾಡಿದ ನಂತರ ದೇವಾಲಯಗಳನ್ನು ತೆರೆಯಲು ಅವಕಾಶ ನೀಡಲಾಗಿದೆ. ಹಾಗಾಗಿ ಸ್ಯಾಂಡಲ್ವುಡ್ ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಅವರು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಜೊತೆ ಸಾಂಪ್ರದಾಯಕ ಉಡುಗೆ ತೊಟ್ಟು, ಚಾಮುಂಡಿ ಬೆಟ್ಟಕ್ಕೆ ಬಂದು ತಾಯಿಗೆ ಪೂಜೆ ಸಲ್ಲಿಸಿದರು.
ಇವರ ಜೊತೆ ಜೀ ಕನ್ನಡ ಖಾಸಗಿ ವಾಹಿನಿಯ ಬ್ಯುಸಿನೆಸ್ ಹೆಡ್ ರಾಘವೇಂದ್ರ ಹುಣಸೂರು ಸಹ ಉಪಸ್ಥಿತರಿದ್ದರು.