ಮೈಸೂರು: ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿ, ನಾಲ್ವರನ್ನು ಬಂಧಿಸಿದ್ದಾರೆ. ಈ ವೇಳೆ ಕೋಲ್ಕತ್ತಾ ಮೂಲದ ಯುವತಿಯನ್ನು ರಕ್ಷಣೆ ಮಾಡಿದ್ದಾರೆ.
ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆ ಮೇಲೆ ಸಿಸಿಬಿ ದಾಳಿ: ನಾಲ್ವರು ಅರೆಸ್ಟ್ - ccb raid on sex racket
ಮೈಸೂರಿನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿ, ಕೋಲ್ಕತ್ತಾ ಮೂಲದ ಯುವತಿಯನ್ನು ಸಿಸಿಬಿ ಪೊಲೀಸರು ರಕ್ಷಣೆ ಮಾಡಿದ್ದಾರೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸಾಂದರ್ಭಿಕ ಚಿತ್ರ
ವೇಶ್ಯಾವಾಟಿಕೆ ನಡೆಸುತ್ತಿದ್ದ ಹೂಟಗಳ್ಳಿ ಕೆಹೆಚ್‌ಬಿ ಕಾಲೋನಿಯ ಕಾಂತ (36), ಗುರು (34), ಕುವೆಂಪುನಗರದ ಗುಣವತಿ (27) ಹಾಗೂ ವೇಶ್ಯಾವಾಟಿಕೆಯಲ್ಲಿ ತೊಡಗಿದ್ದ ಹುಲ್ಲಹಳ್ಳಿಯ ಪ್ರಕಾಶ್ (30) ಬಂಧಿತ ಆರೋಪಿಗಳು.
ಹೂಟಗಳ್ಳಿಯಲ್ಲಿರುವ ಕೆಹೆಚ್‌ಬಿ ಕಾಲೋನಿಯ ಮನೆಯೊಂದರಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಮಾಹಿತಿ ಮೇರೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದರು. ಆರೋಪಿಗಳು ನೀಡಿದ ಹಣದ ಆಮಿಷದಿಂದ ವೇಶ್ಯಾವಾಟಿಕೆಗೆ ತಳ್ಳಲ್ಪಟ್ಟಿದ್ದ ಕೋಲ್ಕತ್ತಾ ಮೂಲದ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.