ಕರ್ನಾಟಕ

karnataka

ETV Bharat / state

ದ್ವಿಚಕ್ರ ವಾಹನ ಕಳ್ಳನ ಬಂಧನ: 6 ಬೈಕ್​ಗಳು ವಶ - Mysore Latest Crime News

ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ದೇವರಾಜ ಠಾಣಾ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ಅಂದಾಜು 1.20 ಲಕ್ಷ ರೂ. ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Arrest of two-wheeler thief
ದ್ವಿಚಕ್ರ ವಾಹನ ಕಳ್ಳನ ಬಂಧನ : 6 ಬೈಕ್​ಗಳು ವಶ

By

Published : Sep 15, 2020, 2:05 PM IST

ಮೈಸೂರು: ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ ಆರೋಪಿಯನ್ನು ದೇವರಾಜ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಆನಂದ್ (34)ಬಂಧಿತ ಆರೋಪಿ. ಈತ ಪಿರಿಯಾಪಟ್ಟಣ ತಾಲೂಕಿನ ಐಚನಹಳ್ಳಿ ಗ್ರಾಮದವನು. ಕಳೆದ ಸೆ. 3ರಂದು ಕಾರ್ತಿಕ್ ಎಂಬುವವರು ಕೆ.ಆರ್.ಆಸ್ಪತ್ರೆಯ ಆವರಣದಲ್ಲಿರುವ ಜಯದೇವ ಆಸ್ಪತ್ರೆಯ ಪಾರ್ಕಿಂಗ್​ನಲ್ಲಿ ಬೈಕ್ ನಿಲ್ಲಿಸಿದ್ದರು. ಅವರ ಕೆಲಸ ಮುಗಿಸಿ ಬಂದು ನೋಡಿದಾಗ ಬೈಕ್ ಇರಲಿಲ್ಲ. ತಕ್ಷಣ ಅವರು ದೇವರಾಜ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ‌.

ಈ ಪ್ರಕರಣದ ಆರೋಪಿ ಪತ್ತೆಗಾಗಿ ಪೊಲೀಸರು ಒಬ್ಬ ಸಿಬ್ಬಂದಿಯನ್ನು ನೇಮಿಸಿದ್ದು, ಸೆ .13ರಂದು ಈ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಯು ಬೈಕ್​ನಲ್ಲಿ ಹೂಟಗಳ್ಳಿಯ ಸಿಂಗಲ್​ನಲ್ಲಿ ಹೋಗುತ್ತಿದ್ದನ್ನು. ಪೊಲೀಸ್​ ಸಿಬ್ಬಂದಿ ಅನುಮಾನಗೊಂಡು ವಿಚಾರಣೆಗೆ ಒಳಪಡಿಸಿದಾಗ ಕೆ.ಆರ್. ಆಸ್ಪತ್ರೆಯಲ್ಲಿ ಕಳೆದ 15 ದಿನಗಳಿಂದ ಒಟ್ಟು 4 ಬೈಕ್​ಗಳು ಮತ್ತು 2016-17 ನೇ ಸಾಲಿನಲ್ಲಿ 1 ಹೊಂಡಾ

ಆಕ್ಟೀವಾ ಮತ್ತು ಬೈಕ್​​ ಅನ್ನು ಕಳವು ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಬಂಧಿತನಿಂದ ಅಂದಾಜು 1.20 ಲಕ್ಷ ರೂ. ಮೌಲ್ಯದ 6 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಂಡ ಪೊಲೀಸರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಈ ಸಂಬಂಧ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details