ಕರ್ನಾಟಕ

karnataka

ETV Bharat / state

ತೀರ್ಪು ಬಂದ ನಂತರ ಎಲ್ಲ  ಅನರ್ಹ ಶಾಸಕರಿಗೂ ಒಳ್ಳೆಯದಾಗುತ್ತೆ: ಡಿಸಿಎಂ ವಿಶ್ವಾಸ! - Mysuru Dasara

ಡಿಕೆಶಿ ಪ್ರಕರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಆಡಳಿತ ದೃಷ್ಟಿಯಿಂದ ಬೆಳಗಾವಿ ವಿಂಗಡಣೆ ಮಾಡಿ‌ ಜಿಲ್ಲೆ ಮಾಡಿದರೆ ಒಳ್ಳೆಯದಾಗುತ್ತದೆ. ಇದು ಮುಂದಿನ‌ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದರು.

ಡಿಸಿಎಂ ಅಶ್ವತ್ಥ್ ನಾರಾಯಣ್

By

Published : Sep 20, 2019, 1:35 PM IST

ಮೈಸೂರು: ಅನರ್ಹ ಶಾಸಕರಿಗೆ ನ್ಯಾಯಾಲಯದಿಂದ ತೀರ್ಪು ಬಂದ ನಂತರ ಎಲ್ಲರಿಗೂ ಒಳ್ಳೆಯದಾಗುತ್ತದೆ. ಯಾರಿಗೂ ಬೇಸರವಿಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ ಹೇಳಿಕೆ ನೀಡಿದ್ದಾರೆ.

ಮಂತ್ರಿಯಾದ ನಂತರ ಮೊದಲ ಬಾರಿಗೆ ಮೈಸೂರಿಗೆ ಆಗಮಿಸಿದ ಅಶ್ವತ್ಥ್ ನಾರಾಯಣ, ಸರ್ಕಾರಿ ಅತಿಥಿ ಗೃಹದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದರು. ಅನರ್ಹ ಶಾಸಕರ ಪ್ರಕರಣದಲ್ಲಿ ವಿಳಂಬವಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನ್ಯಾಯಾಲಯದಿಂದ ತೀರ್ಪು ಬಂದ ನಂತರ ಎಲ್ಲರಿಗೂ ಒಳ್ಳೆಯದಾಗುತ್ತದೆ, ಯಾರಿಗೂ ಬೇಸರವಿಲ್ಲ ಎಂದರು.

ಡಿಸಿಎಂ ಅಶ್ವತ್ಥ್ ನಾರಾಯಣ್

ಡಿಕೆಶಿ ಪ್ರಕರಣದ ಬಗ್ಗೆ ಮಾತನಾಡಲು ನಿರಾಕರಿಸಿದ ಅವರು, ಆಡಳಿತ ದೃಷ್ಟಿಯಿಂದ ಬೆಳಗಾವಿಯನ್ನು ವಿಂಗಡಣೆ ಮಾಡಿ‌ ಜಿಲ್ಲೆ ಮಾಡಿದರೆ ಒಳ್ಳೆಯದಾಗುತ್ತದೆ. ಇದು ಮುಂದಿನ‌ ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದರು.

ಈ ಬಾರಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ವಿಭಿನ್ನವಾಗಿ ಆಚರಿಸಲು ತಿರ್ಮಾನಿಸಿದ್ದು, ಯುವಕರನ್ನು ಸೆಳೆಯುವ ಮೊಬೈಲ್​ನಿಂದ ದೂರ ಉಳಿದು ಕುಟುಂಬದ ಜೊತೆ ದಸರಾ ನೋಡುವಂತೆ ಮಾಡುವ ಕಾರ್ಯಕ್ರಮ ಮಾಡಲಾಗುವುದು ಎಂದು ಭರವಸೆ ನೀಡಿದರು.

ABOUT THE AUTHOR

...view details