ಮೈಸೂರು:ರಾಜ್ಯ ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಮೈಸೂರಿನ ವರುಣ ಕ್ಷೇತ್ರದಲ್ಲಿ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವಿನ ಗೂಂಡಾಗಿರಿ ಮುಂದುವರೆದಿದೆ. ವರುಣ ಕ್ಷೇತ್ರದ ಟಿ. ನರಸೀಪುರ ಕಸಬಾ ಹೋಬಳಿಯಲ್ಲಿ ಬಿಜೆಪಿಯ ಬೂತ್ ಮಟ್ಟದ ಅಧ್ಯಕ್ಷನ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಮಾರಣಾಂತಿಕ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.
ಟಿ. ನರಸೀಪುರ ಕಸಬಾ ಹೋಬಳಿ ಬೈರಾಪುರ ಬಡಾವಣೆ ಬೂತ್ ನಂಬರ್ 109ರಲ್ಲಿ ನಮ್ಮ ಭಾರತೀಯ ಜನತಾ ಪಾರ್ಟಿಯ ಬೂತ್ ಅಧ್ಯಕ್ಷ ದಿಲೀಪ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ದಿಲೀಪ್ ತಲೆಗೆ ಗಾಯಗಳಾಗಿದೆ. 'ಕ್ಷುಲ್ಲಕ ಕಾರಣವನ್ನೇ ನೆಪ ಮಾಡಿಕೊಂಡು ಕಾಂಗ್ರೆಸ್ ಕಾರ್ಯಕರ್ತರು ಗಲಾಟೆ ನಡೆಸಿ, ಹಲ್ಲೆ ಮಾಡಿದ್ದಾರೆ' ಎಂದು ಆರೋಪಿಸಿ ಟಿ. ನರಸೀಪುರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಹಲ್ಲೆಯಾದ ದಿಲೀಪ್ ಕುಮಾರ್ನ್ನು ಟಿ. ನರಸೀಪುರ ಚಿಕಿತ್ಸೆಗೆ ದಾಖಲಿಸಲಾಗಿದೆ.