ಮೈಸೂರು: ಸಂಚಾರಿ ಪೊಲೀಸರ ಮೇಲೆ ರೊಚ್ಚಿಗೆದ್ದ ಜನರು ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಜಯನಗರ ಪೊಲೀಸರು 8 ಜನರನ್ನು ಬಂಧಿಸಿದ್ದಾರೆ.
ಸೋಮವಾರ ಸಂಜೆ ಬೋಗಾದಿ ಬಳಿಯ ರಿಂಗ್ ರಸ್ತೆಯಲ್ಲಿ ಸಂಚಾರಿ ಪೊಲೀಸರು ತಪಾಸಣೆ ನಡೆಸುತ್ತಿದ್ದರು. ಈ ವೇಳೆ ತಪಾಸಣೆಯಿಂದ ತಪ್ಪಿಸಿಕೊಳ್ಳಲು ಬೈಕ್ ಸವಾರ ದೇವರಾಜ್ ಯು-ಟರ್ನ್ ತೆಗೆದುಕೊಂಡಿದ್ದು ಹಿಂಬದಿಯಿಂದ ಬರುತ್ತಿದ್ದ ಟಿಪ್ಪರ್ಗೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದ.
ಹಿಂಬದಿ ಸವಾರ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಅಪಘಾತಕ್ಕೆ ಸಂಚಾರಿ ಪೊಲೀಸರೇ ಕಾರಣ ಎಂದು ಸಾರ್ವಜನಿಕರು ಪೊಲೀಸರ ಮೇಲೆ ಹಲ್ಲೆ ಮಾಡಿ ಗರುಡ ವಾಹನವನ್ನು ಧ್ವಂಸಗೊಳಿಸಿದ್ದರು.
ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಯಲ್ಲಿ ಎಎಸ್ಐ ಮಾದೇಗೌಡ ಕಾನ್ಸ್ಸ್ಟೇಬಲ್ ಮಂಜು ಮತ್ತು ಸ್ವಾಮಿ ನಾಯಕ್ 3 ಪ್ರತ್ಯೇಕ ದೂರುಗಳಲ್ಲಿ ಸರ್ಕಾರಿ ವಾಹನ ಧ್ವಂಸ, ಕರ್ತವ್ಯಕ್ಕೆ ಅಡ್ಡಿ ಆರೋಪದ ಅಡಿ 3 ದೂರುಗಳನ್ನು ದಾಖಲಿಸಿದ್ದರು. ಈ ದೂರಿನ ಆಧಾರದ ಮೇಲೆ ಹಲ್ಲೆ ಮಾಡಿದ 8 ಜನರನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ.
ಓದಿ:ಪೊಲೀಸ್ ಲಾಠಿ ಸಿಲುಕಿ ಬೈಕ್ ಸವಾರ ಸಾವು: ರೊಚ್ಚಿಗೆದ್ದ ಸಾರ್ವಜನಿಕರಿಂದ ಪೊಲೀಸರಿಗೆ ಧರ್ಮದೇಟು