ಮೈಸೂರು:ಎನ್ ಆರ್ ಕ್ಷೇತ್ರದ ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಅವರ ಮೇಲಿನ ಮಾರಣಾಂತಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೈಸೂರು ನ್ಯಾಯಾಲಯಕ್ಕೆ 8 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ.
ಶಾಸಕ ತನ್ವೀರ್ ಸೇಠ್ ಮೇಲಿನ ಮಾರಣಾಂತಿಕ ಹಲ್ಲೆ ಕೇಸ್.. 8 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್.. - mysore police station
ಈ ಸಂಬಂಧ ಕೆಲ ದಿನಗಳ ಹಿಂದೆ ಮೈಸೂರಿನ ಕಾರಾಗೃಹಕ್ಕೆ ಆಗಮಿಸಿದ್ದ ಶಾಸಕ ತನ್ವೀರ್ ಸೇಠ್ ಅವರು ತಮ್ಮ ಮೇಲೆ ಹಲ್ಲೆ ಮಾಡಿದ ಯುವಕನನ್ನು ಪತ್ತೆ ಹಚ್ಚಿದ್ದಾರೆ.
ಫರ್ಹಾನ್ ಪಾಷಾ, ನೂರ್ಖಾನ್, ಮುಜೀಬ್, ಮುಜಾಮಿಲ್, ಮತಿನ್‌ಬೇಗ್, ಅಕ್ರಂ, ಅಬೀದ್ ಪಾಷಾ ಮತ್ತು ಇರ್ಫಾನ್ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದಾರೆ. ನವೆಂಬರ್ 17ರ ರಾತ್ರಿ ಬನ್ನಿಮಂಟಪದ ಕಲ್ಯಾಣಮಂಟಪವೊಂದರಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ತನ್ವೀರ್ ಸೇಠ್ ಮೇಲೆ ಫರ್ಹಾನ್ ಪಾಷಾ ಮಾರಕಾಸ್ತ್ರದಿಂದ ತೀವ್ರವಾಗಿ ಹಲ್ಲೆ ನಡೆಸಿ, ಪರಾರಿಯಾಗಲು ಯತ್ನಿಸಿದ್ದ. ಆದರೆ, ಸಾರ್ವಜನಿಕರ ಕೈಗೆ ಸಿಕ್ಕಿ ಬಿದ್ದಿದ್ದ. ಆತನನ್ನು ವಿಚಾರಣೆ ನಡೆಸಿದ ಪೊಲೀಸರು ಉಳಿದ 7 ಮಂದಿಯನ್ನು ಬಂಧಿಸಿದ್ದರು.
ಈ ಸಂಬಂಧ ಕೆಲ ದಿನಗಳ ಹಿಂದೆ ಮೈಸೂರಿನ ಕಾರಾಗೃಹಕ್ಕೆ ಆಗಮಿಸಿದ್ದ ಶಾಸಕ ತನ್ವೀರ್ ಸೇಠ್ ಅವರು ತಮ್ಮ ಮೇಲೆ ಹಲ್ಲೆ ಮಾಡಿದ ಯುವಕನನ್ನು ಪತ್ತೆ ಹಚ್ಚಿದ್ದಾರೆ.