ಮೈಸೂರು:ಮದುವೆ ನಿಶ್ಚಿತವಾಗಿದ್ದ ಯುವಕನ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಕೃಷಿ ಕಚೇರಿ ಬಳಿ ನಡೆದಿದೆ.
ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಗ್ರಾಮದ ನಿವಾಸಿಯಾದ ರವಿ ಕುಮಾರ್ ಎಂಬಾತನೇ ಹಲ್ಲೆಗೊಳಗಾದ ಯುವಕನಾಗಿದ್ದು, ಈತನಿಗೆ ಅದೇ ಗ್ರಾಮದ ರೈತ ಮುಖಂಡ ದೇವರಾಜು ಎಂಬುವವರ ಸಂಬಂಧಿಕರ ಹುಡುಗಿ ಜೊತೆ ಮಾರ್ಚ್ 13 ರಂದು ಮದುವೆ ನಿಶ್ಚಿಯವಾಗಿತ್ತು.
ಬೆಟ್ಟದಪುರ ಕೃಷಿ ಕಚೇರಿ ಬಳಿ ದುಷ್ಕರ್ಮಿಗಳು ರವಿ ಕುಮಾರ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ಯುವಕನನ್ನು ಕಂಡ ಗ್ರಾಮಸ್ಥರು ಬೆಟ್ಟದಪುರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಕುಟುಂಬದವರಿಗೆ ಮಾಹಿತಿ ತಿಳಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇನ್ನು ಈ ಸಂಬಂಧ ಬೆಟ್ಟದಪುರ ಗ್ರಾಮದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ಹಲ್ಲೆ ನಡೆದ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದು, ಹಲ್ಲೆ ಯಾರು ನಡೆಸಿದ್ದು, ಯಾವ ಕಾರಣಕ್ಕಾಗಿ ಹಲ್ಲೆ ಮಾಡಿದ್ದಾರೆ ಎಂದು ದೂರಿನನ್ವಯ ತನಿಖೆ ಮುಂದುವರೆಸಿದ್ದಾರೆ.